ರಾಜ್ಯ ಸುದ್ದಿ

ಡಿಕೆ ಶಿವಕುಮಾರ್ ಗೆ ಕೊರೋನಾ ಪಾಸಿಟಿವ್; ಆತ್ಮಸ್ಥೈರ್ಯ ತುಂಬಿದ ಸೋನಿಯಾ, ರಾಹುಲ್ ಗಾಂಧಿ, ದೇವೇಗೌಡ  

ವರದಿಗಾರ (ಆ.25): ಕೊರೋನಾ ಪಾಸಿಟವ್ ಬಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು ದೂರವಾಣಿ ಕರೆ ಮಾಡಿ ಆತ್ಮಸ್ಥೈರ್ಯ ತುಂಬಿದ್ದು, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ.ಕೆ ಶಿವಕುಮಾರ್ ಅವರಿಗೆ ಸೋನಿಯಾ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಎಐಸಿಸಿ ಮುಖಂಡರು ಮಂಗಳವಾರ ಮಧ್ಯಾಹ್ನ ದೂರವಾಣಿ ಕರೆ ಮಾಡಿ, ಆರೋಗ್ಯ ಕ್ಷೇಮ ವಿಚಾರಿಸಿದರು. ಆದಷ್ಟು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

“ಕೆಪಿಸಿಸಿ ಅಧ್ಯಕ್ಷರು ಹಾಗೂ ನನ್ನ ಆತ್ಮೀಯರಾದ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ಕೊರೊನ ಸೋಂಕು ತಗುಲಿರುವುದು ಕೇಳಿ ಮನಸ್ಸಿಗೆ ಬಹಳ ನೋವುಂಟಾಯಿತು ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ”

-ಹೆಚ್.ಡಿ.ದೇವೇಗೌಡ
ಮಾಜಿ ಪ್ರಧಾನ ಮಂತ್ರಿ

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group