ರಾಷ್ಟ್ರೀಯ ಸುದ್ದಿ

ಕೇಂದ್ರ ಸರ್ಕಾರದ ವಿರುದ್ಧ ಪ್ರಬಲ ಹೋರಾಟಕ್ಕೆ ಸಂಕಲ್ಪ; ಮತ್ತೊಮ್ಮೆ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಲು ಸೋನಿಯಾ ಪ್ರಯತ್ನ

ವರದಿಗಾರ, (ಆ.26): ಕಾಂಗ್ರೆಸ್ ನಾಯಕತ್ವವನ್ನು ಮತ್ತೊಮ್ಮೆ ವಹಿಸಿಕೊಂಡ ನಂತರ, ಸೋನಿಯಾ ಗಾಂಧಿ ಮಂಗಳವಾರ ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ರಾಜ್ಯಗಳ ಜಿಎಸ್‌ಟಿ ಪರಿಹಾರ ಕುರಿತು ಮಾತುಕತೆ ನಡೆಸಿದ್ದು, ಆಗಸ್ಟ್ 27ರಂದು ನಡೆಯುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಸಾಮೂಹಿಕ ನಿಲುವು ಪ್ರಕಟಿಸಲು ಅವರು ಮನವಿ ಮಾಡಿದ್ದಾರೆ.

ಬಿಜೆಪಿಯ ವಿರುದ್ಧ ಮತ್ತೊಮ್ಮೆ ಬಲಿಷ್ಠ ವಿರೋಧ ಪಕ್ಷಗಳ ಒಕ್ಕೂಟ ರಚಿಸುವ ಬಗ್ಗೆಯೂ ಸೋನಿಯಾ ನಿರ್ಧರಿಸಿದ್ದಾರೆ.

ಕೊರೊನಾ ಹೋರಾಟದ ಮಧ್ಯೆ ದೇಶದಲ್ಲಿ ನಡೆಸಲು ಉದ್ದೇಶಿಸಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳ ಪ್ರವೇಶದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸೇರಿದಂತೆ ಹಲವು ವಿಷಯಗಳ ಕುರಿತು ವಿರೋಧ ಪಕ್ಷಗಳ ಮುಖ್ಯಮಂತ್ರಿಗಳ ಸಭೆ ಕರೆಯಲು ಸೋನಿಯಾ ಹಾಗೂ ಮಮತಾ ನಿರ್ಧರಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದವರ ಮೇಲೆ ದುಷ್ಪರಿಣಾಮ ಬೀರುವ ಪ್ರಮುಖವಾದ ವಿಷಯಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರಬಲ ಹೋರಾಟಕ್ಕಾಗಿ ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವುದು ಇದರ ಉದ್ದೇಶ ಎಂದು ಮೂಲಗಳು ತಿಳಿಸಿವೆ.

ಕೊರೊನಾ ಸೋಂಕು ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆಗಳನ್ನು ಮುಂದೂಡಲು ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನದ ಕುರಿತು ಚರ್ಚಿಸಲು ಪ್ರತಿಪಕ್ಷ ಮುಖ್ಯಮಂತ್ರಿಗಳು ಇಂದು ಮಧ್ಯಾಹ್ನ ಸಭೆ ಸೇರುವ ನಿರೀಕ್ಷೆಯಿದೆ.

ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಮಮತಾ ಬ್ಯಾನರ್ಜಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮುಂದಿನ ತಿಂಗಳು ನಿಗದಿಯಾಗಿದ್ದ ಜೆಇಇ ಮತ್ತು ನೀಟ್ ಅನ್ನು ಮುಂದೂಡಬೇಕೆಂಬ ಮನವಿಗಳನ್ನು ಕೇಂದ್ರ ಸರ್ಕಾರ ವಿರೋಧಿಸುತ್ತಾ ಬಂದಿದೆ.

ರಾಜ್ಯಗಳಿಗೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಜಂಟಿ ಕಾರ್ಯತಂತ್ರವನ್ನು ರೂಪಿಸಲು ಗಾಂಧಿಯವರು ಕಾಂಗ್ರೆಸ್ ನಾಲ್ವರು ಮುಖ್ಯಮಂತ್ರಿಗಳಲ್ಲದೆ ಮಮತಾ ಬ್ಯಾನರ್ಜಿ, ಉದವ್ ಠಾಕ್ರೆ ಮತ್ತು ಹೇಮಂತ್ ಸೊರೆನ್ ಅವರೊಂದಿಗೆ ವರ್ಚುವಲ್ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಕೋವಿಡ್‌ -19 ಸಾಂಕ್ರಾಮಿಕ ರೋಗದಿಂದಾಗಿ ಆದಾಯ ನಷ್ಟಕ್ಕೆ ಒಳಗಾಗಿರುವ ರಾಜ್ಯಗಳಿಗೆ ಪರಿಹಾರ ನೀಡುವ ಕುರಿತು ಚರ್ಚಿಸಲು ಜಿಎಸ್‌ಟಿ ಕೌನ್ಸಿಲ್ ಆಗಸ್ಟ್ 27 ರಂದು ಸಭೆ ಸೇರಲಿದೆ.

ಎಲ್ಲಾ ರಾಜ್ಯಗಳ ಹಣಕಾಸು ಮಂತ್ರಿಗಳು ಜಿಎಸ್‌ಟಿ ಕೌನ್ಸಿಲ್‌ ಸಭೆಯ ಭಾಗವಾಗಿದ್ದಾರೆ, ಅಲ್ಲಿ ಪ್ರತಿಪಕ್ಷ ಮುಖ್ಯಮಂತ್ರಿಗಳು ಜಂಟಿಯಾಗಿ ಸರ್ಕಾರಕ್ಕೆ 14ರಷ್ಟು ಶೇಕಡಾ ಜಿಎಸ್‌ಟಿ ಪರಿಹಾರವನ್ನು ನೀಡುವಂತೆ ಒತ್ತಾಯಿಸಲಿದ್ದಾರೆ. ಬುಧವಾರ ಮಧ್ಯಾಹ್ನ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಯಾರೆಲ್ಲಾ ಭಾಗವಹಿಸಲಿದ್ದಾರೆ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group