ಸುತ್ತ-ಮುತ್ತ

ಬೆಳ್ತಂಗಡಿ: ಎಸ್.ಡಿ.ಪಿ.ಐ ಯಿಂದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಅಭಿಯಾನ

ವರದಿಗಾರ (ಆ.26): ಬೆಳ್ತಂಗಡಿ ತಾಲೂಕಿನ ಲಾಯಿಲಾ ಆದರ್ಶ ನಗರ ವ್ಯಾಪ್ತಿಯ ಸಾರ್ವಜನಿಕರಿಗೆ ಭಾರತ ಸರ್ಕಾರದ ಆರೋಗ್ಯ ಯೋಜನೆಯಾಗಿರುವ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೋಂದಾವಣೆ ಅಭಿಯಾನವು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ – ಎಸ್.ಡಿ.ಪಿ.ಐ ಲಾಯಿಲಾ ಬ್ರಾಂಚ್ ವತಿಯಿಂದ ಲಾಯಿಲಾ ಆದರ್ಶ ನಗರ ಜಂಕ್ಸನ್ ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಎಸ್.ಡಿ.ಪಿ.ಐ ಲಾಯಿಲಾ ಬ್ರಾಂಚ್ ಅಧ್ಯಕ್ಷ ‌ ರಿಯಾಝ್ ಎ.ಪಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾಧ್ಯಕ್ಷ ಹೈದರ್ ನೀರ್ಸಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಎಸ್.ಡಿ.ಪಿ.ಐ ತಾಲೂಕು ಸಮಿತಿ ಸದಸ್ಯರಾದ ಸಾದಿಕ್ ಲಾಯಿಲಾ ಹಾಗೂ ಇನ್ನೀತರ ನಾಯಕರು ಉಪಸ್ಥಿತರಿದ್ದರು. ಶಿಬಿರದಲ್ಲಿ 180 ಮಂದಿ ಸಾರ್ವಜನಿಕರು ಹೊಸ ಕಾರ್ಡ್ ನೋಂದಾವಣೆ ಮಾಡಿಕೊಂಡರು. ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ಆಯೋಜಕರು ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group