ರಾಷ್ಟ್ರೀಯ ಸುದ್ದಿ

ದೆಹಲಿ ಗಲಭೆ: ಜೆಎನ್ ಯು ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್ ಇಮಾಮ್‌ ಐದು ದಿನ ಪೊಲೀಸ್ ಕಸ್ಟಡಿಗೆ

ವರದಿಗಾರ (ಆ.26): ಈಶಾನ್ಯ ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್ ಯು ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್ ಇಮಾಮ್ ಅವರನ್ನು ದೆಹಲಿ ನ್ಯಾಯಾಲಯೊಂದು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಮಂಗಳವಾರ, ದೆಹಲಿ ಪೊಲೀಸ್ ವಿಶೇಷ ಘಟಕವು ಗಲಭೆಗೆ ಸಂಬಂಧಿಸಿದಂತೆ ಇಮಾಮ್ ಅವರನ್ನು ಬಂಧಿಸಿತ್ತು. ಪ್ರೊಡಕ್ಷನ್ ವಾರಂಟ್‌ ಪಡೆದು ಅವರನ್ನು ಎರಡು ದಿನಗಳ ಹಿಂದೆ ಅಸ್ಸಾಂನಿಂದ ಮತ್ತೆ ರಾಜಧಾನಿಗೆ ಕರೆತರಲಾಗಿತ್ತು.

ದೆಹಲಿ ಪೊಲೀಸರು ಶಾರ್ಜಿಲ್ ಇಮಾಮ್‌ ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಸಿದ್ದರು.

ಹೆಚ್ಚುವರಿ ಸೆಷನ್ ನ್ಯಾಯಾಧೀಶ ಅಮಿತಾಬ್ ರಾವತ್ ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. ಆದರೆ ಈ ಅವಧಿಯಲ್ಲಿ ಇಮಾಮ್ ಅವರ ವಕೀಲ ಎರಡು ಬಾರಿ ಅವರನ್ನು ಭೇಟಿ ಮಾಡಿ ಕಾನೂನು ಸಂದರ್ಶನ ಪಡೆಯಬಹುದು, ಈ ವೇಳೆ ಪೊಲೀಸ್ ಅಧಿಕಾರಿಗಳ ಉಪಸ್ಥಿತಿ ಇರಬಾರದು ಎಂದು ಸೂಚಿಸಿದರು.

ನ್ಯಾಯಾಲಯದ ವಿಚಾರಣೆಯ ವೇಳೆ, ಇಮಾಮ್ ಪರ ವಕೀಲ ಸುರ್ಬಿ ಧಾರ್ ಐದು ದಿನಗಳ ಕಸ್ಟಡಿ ಕೊಡುವುದನ್ನು ವಿರೋಧಿಸಿ, ಅದನ್ನು ಕಡಿಮೆ ಮಾಡುವಂತೆ ಮನವಿ ಮಾಡಿದರು.

ಸಿಎಎ ವಿರುದ್ಧ ಹಲವು ಸ್ಥಳಗಳಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಇಮಾಮ್ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಜುಲೈ 25 ರಂದು ಇಮಾಮ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group