ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ: ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

ವರದಿಗಾರ,  (ಆ.26): ಉತ್ತರ ಪ್ರದೇಶದ ವಾರಣಾಸಿಯ ಗಡ್ಖರಾ ಗ್ರಾಮದ ಪಂಚಾಯತ್ ಭವನದ ಬಳಿಯಲ್ಲಿದ್ದ ಬಾಬಾ ಸಾಹೇಬ್‌ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಕೆಲವು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಈ ಸಂಬಂಧ ಬುಧವಾರ ಫುಲ್ಪುರ ಪ್ರದೇಶದಲ್ಲಿ ಕೆಲವು ಹೊತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನೆಯನ್ನು ಖಂಡಿಸಿ ಸಾರ್ವಜನಿಕರು ಹಲವು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಆಕ್ರೋಶಿತ ಜನರು ತಪ್ಪಿತಸ್ಥರನ್ನು ಬಂಧಿಸಿ ಹೊಸ ಪ್ರತಿಮೆ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಜಿಲ್ಲೆಯ ಹಿರಿಯ ಅಧಿಕಾರಿಗಳು ಮಾಹಿತಿ ಪಡೆದ ನಂತರ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಕಾರರನ್ನು ಸಮಾಧಾನಪಡಿಸಿ ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಹಾನಿಗೊಳಗಾದ ಪ್ರತಿಮೆಯನ್ನು ತೆಗೆದು ಹೊಸ ಪ್ರತಿಮೆಯನ್ನು ಅದರ ಸ್ಥಳದಲ್ಲಿ ಇಡಲಾಗಿದೆ. ಆರೋಪಿಗಳ ಬಂಧನಕ್ಕೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಹಿಂದೆ ಎರಡು ತಿಂಗಳ ಹಿಂದೆ ಕೂಡ ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಲಾಗಿತ್ತು.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group