ರಾಜ್ಯ ಸುದ್ದಿ

ಟಿಪ್ಪು ಈ ನೆಲದ ಮಗ, ವೀರ ಹೋರಾಟಗಾರ ಎಂದು ಹೆಚ್‌. ವಿಶ್ವನಾಥ್ ಸತ್ಯವನ್ನೇ ಹೇಳಿದ್ದಾರೆ: ಈಶ್ವರ ಖಂಡ್ರೆ

ಟಿಪ್ಪು ಇತಿಹಾಸವನ್ನು ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ

ವರದಿಗಾರ(ಆ.27): ರಾಜ್ಯ ಬಿಜೆಪಿ ಸರ್ಕಾರ ಇತ್ತೀಚೆಗೆ ಶಾಲಾ-ಕಾಲೇಜು ಪಠ್ಯದಿಂದ ಟಿಪ್ಪು ಸುಲ್ತಾನ್‌ ಕುರಿತು ಪಾಠಕ್ರಮಗಳನ್ನು ತೆಗೆಯಲು ಮುಂದಾಗಿದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಮತ್ತು ಜೀವನವನ್ನು ದೇಶಕ್ಕಾಗಿ ಮುಡಿಪಾಗಿಟ್ಟ ಟಿಪ್ಪು ಸುಲ್ತಾನರ್ ಇತಿಹಾಸವನ್ನು ಅಳಿಸಿ ಹಾಕಲು ಪ್ರಯತ್ನಿಸಿದೆ. ಆದರೆ, ಇದೇ ವೇಳೆ ಸ್ವತಃ ಬಿಜೆಪಿ ನಾಯಕ ಹೆಚ್‌. ವಿಶ್ವನಾಥ್‌, ಟಿಪ್ಪು ಓರ್ವ ಅಪ್ರತಿಮ ದೇಶಭಕ್ತ , ಈ ನೆಲದ ಮಗ, ವೀರ ಹೋರಾಟಗಾರ ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಮತ್ತೆ ಮುಖಭಂಗಕ್ಕೀಡಾಗಿದೆ.

ಹೆಚ್ ವಿಶ್ವನಾಥ್ ರವರ ಹೇಳಿಕೆಯನ್ನು ಸ್ವಾಗತಿಸಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ವಿಶ್ವನಾಥರು ಸತ್ಯವನ್ನೇ ಹೇಳಿದ್ದಾರೆ ಎಂದು ಹೇಳಿದ್ದಾರೆ.

ವೀಡಿಯೋ ವೀಕ್ಸಿಸಿ: 

ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್‌ ವೀರ ಸೇನಾನಿ, ಬ್ರಿಟೀಷರ ವಿರುದ್ಧ ಹೋರಾಡಿದ ಅಪ್ರತಿಮ ಸ್ವತಂತ್ಯ್ರ ಹೋರಾಟಗಾರ. ಆದರೆ, ಬಿಜೆಪಿ ಸರ್ಕಾರ ಇತಿಹಾಸ ತಿರುಚುವ ಕೆಲಸಕ್ಕೆ ಮುಂದಾಗಿದೆ. ಈ ನಡುವೆ ಹೆಚ್‌. ವಿಶ್ವನಾಥ್‌ ಕೊನೆಗೂ ಟಿಪ್ಪು ಕುರಿತು ಸತ್ಯವನ್ನೇ ಹೇಳಿದ್ದಾರೆ. ಹೀಗಾಗಿ ಅವರ ಮಾತಿಗೆ ನನ್ನ ಬೆಂಬಲ ಇದೆ ಎಂದು ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಮಾತನಾಡಿರುವ ಈಶ್ವರ ಖಂಡ್ರೆ, “ವಿಶ್ವನಾಥ್ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಆದರೆ, ಬಿಜೆಪಿಯವರು ಸತ್ಯ ಮರೆಮಾಚುವ ಕೆಲಸವನ್ನು ಮಾಡುತ್ತಿದ್ದಾರೆ. ಟಿಪ್ಪು ಒಬ್ಬ ದೇಶ ಭಕ್ತ , ವೀರ ಸೇನಾನಿ. ಟಿಪ್ಪು ನಿರ್ಮಾಣ ಮಾಡಿರುವ ದೇವಸ್ಥಾನ ಮತ್ತು ಕೋಟೆಗಳನ್ನುಗಳನ್ನು ನಾಶಮಾಡಲು ಆಗುತ್ತಾ? ಬ್ರಿಟೀಷರ ವಿರುದ್ಧ ಅವರು ಹೋರಾಡಿದ್ದನ್ನು ಸುಳ್ಳು ಎಂದು ಹೇಳಲಾಗುತ್ತದೆಯೇ? ಬಿಜೆಪಿ ನಾಯಕರು ಇತಿಹಾಸವನ್ನು ತಿರುಚುವ ಪ್ರಯತ್ನ ಮಾಡುತ್ತಿದ್ದಾರೆ. ಆದರೂ, ವಿಶ್ವನಾಥ್ ಸತ್ಯವನ್ನು ಹೇಳಿದ್ದಾರೆ ಹಾಗಾಗಿ ನಾನು ವಿಶ್ವನಾಥ್ ಹೇಳಿಕೆಯನ್ನು ಬೆಂಬಲಿಸುವೆ” ಎಂದಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group