ರಾಷ್ಟ್ರೀಯ ಸುದ್ದಿ

ಶಾಲಾ ವ್ಯವಸ್ಥಾಪಕನಿಂದಲೇ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ವೀಡಿಯೋ ಚಿತ್ರೀಕರಿಸಿ ವಿದ್ಯಾರ್ಥಿಗೆ ಬೆದರಿಕೆಯೊಡ್ಡಿದ ಕಾಮುಕ!

ವರದಿಗಾರ (ಆ.27): ಏಳನೆ ತರಗತಿಯ ವಿದ್ಯಾರ್ಥಿನಿಯ ಮೇಲೆ ಶಾಲೆಯ ವ್ಯವಸ್ಥಾಪಕನೊಬ್ಬ ಅತ್ಯಾಚಾರವೆಸಗಿ ಅದನ್ನು ಚಿತ್ರೀಕರಿಸಿಕೊಂಡು, ಯಾರಿಗಾದರೂ ವಿಷಯ ತಿಳಿಸಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

ಕಳೆದ 10 ದಿನಗಳ ಅವಧಿಯಲ್ಲಿ ಗೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎರಡನೇ ಅತ್ಯಾಚಾರ ಪ್ರಕರಣ ಇದಾಗಿದೆ.

ಜುಲೈ 30ರಂದು ಆರೋಪಿ ಶಾಲಾ ಮ್ಯಾನೇಜರ್ ಹರೇಂದರ್ ಯಾದವ್ (38) ತನ್ನ ಮನೆಗೆ 15 ವರ್ಷದ ಬಾಲಕಿಯನ್ನು ಕರೆಸಿಕೊಂಡು ಅತ್ಯಾಚಾರವೆಸಗಿದ್ದ. ವಿಷಯ ಬೆಳಕಿಗೆ ಬರುತ್ತಿದ್ದಂತೆ ಆತ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತಾರದ ಆರೋಪದಲ್ಲಿ ಠಾಣೆಯ ಮುಖ್ಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಆರೋಪಿ, ಅತ್ಯಾಚಾರದ ವಿಡಿಯೋ ಇಟ್ಟುಕೊಂಡು ಬಾಲಕಿಯನ್ನು ಬ್ಯಾಕ್‌ಮೇಲ್‌ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾತ್ರವಲ್ಲ ನಾನು ಈ ದೃಶ್ಯಾವಳಿಯನ್ನು ನಿನ್ನ ತಂದೆಗೆ ತೋರಿಸಿದರೆ ತಂದೆ ನಿನ್ನನ್ನು ಕೊಲ್ಲಬಹುದು ಎಂದು ಬಾಲಕಿಯನ್ನು ಹೆದರಿಸುತ್ತಿದ್ದ.

ಆತನ ಕಿರುಕುಳ ಹೆಚ್ಚಾಗುತ್ತಿದ್ದಂತೆ, ಕೆಲವು ದಿನಗಳ ಬಳಿಕ ವಿಷಯವನ್ನು ಬಾಲಕಿ ತನ್ನ ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣ ಹುಡುಗಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಆರೋಪಿಯನ್ನು ಬಂಧಿಸಿರಲಿಲ್ಲ. ಬಳಿಕ ಆಕೆಯ ತಂದೆ ಉನ್ನತಾಧಿಕಾರಿಗಳಿಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಇದಕ್ಕೂ ಮೊದಲು ಆಗಸ್ಟ್ 16ರಂದು ಗೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದ ಘಟನೆ ನಡೆದಿತ್ತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group