ರಾಷ್ಟ್ರೀಯ ಸುದ್ದಿ

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಪೋಸ್ಟ್; ಕೊನೆಗೂ ಕ್ಷಮೆಕೋರಿದ ಅಂಖಿ ದಾಸ್

ವರದಿಗಾರ (ಆ.27): ಭಾರತದಲ್ಲಿನ ಮುಸ್ಲಿಮರನ್ನು “ಕೆಟ್ಟ ಸಮುದಾಯ” ಎಂದು ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಫೇಸ್‌ಬುಕ್ ಇಂಡಿಯಾ ಸಂಸ್ಥೆಯ ಭಾರತದಲ್ಲಿ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್ ಕೊನೆಗೂ ಮುಸ್ಲಿಮರೊಂದಿಗೆ ಕ್ಷಮೆಯಾಚಿಸಿದ್ದಾರೆ.

ನೂತನ ಪೌರತ್ವ ತಿದ್ದುಪಡಿ ಕಾನೂನು-ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆದುದಕ್ಕೆ ಪ್ರತಿಕ್ರಿಯೆಯಾಗಿ ಕಳೆದ ವರ್ಷ ಪೊಲೀಸ್ ಅಧಿಕಾರಿಯೊಬ್ಬರು ಬರೆದ ಪೋಸ್ಟ್ ಇದಾಗಿತ್ತು.  ಮುಸ್ಲಿಮರಿಗೆ, “ಧರ್ಮದ ಪರಿಶುದ್ಧತೆ ಮತ್ತು ಶರಿಯಾ ವಿಷಯದ ಅನುಷ್ಠಾನವನ್ನು ಹೊರತುಪಡಿಸಿ ಅವರಿಗೆ ಬೇರೆ ಯಾವ ಉದ್ದೇಶವೂ ಇಲ್ಲ” ಎಂದು ಟೀಕಿಸಿ ಫೇಸ್‌ಬುಕ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪೋಸ್ಟ್ ಹಾಕಿದ್ದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತದ ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರವು ಕಳೆದ ವರ್ಷ ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾನೂನಾಗಿದೆ. ವಿಶ್ವಸಂಸ್ಥೆ ಕೂಡ ಈ ಕಾನೂನನ್ನು “ಮೂಲಭೂತವಾಗಿ ತಾರತಮ್ಯ” ಎಂದು ಟೀಕಿಸಿದೆ.

“ನನ್ನ ವೈಯಕ್ತಿಕ ಫೇಸ್‌ಬುಕ್ ಪೋಸ್ಟ್‌ನ ಉದ್ದೇಶ ಇಸ್ಲಾಂ ಧರ್ಮವನ್ನು ಖಂಡಿಸುವುದಾಗಿರಲಿಲ್ಲ” ಎಂದು ಭಾರತ ಮತ್ತು ದಕ್ಷಿಣ, ಮಧ್ಯ ಏಷ್ಯಾದ ಫೇಸ್‌ಬುಕ್‌ನ ನೀತಿ ನಿರ್ದೇಶಕಿ ಅಂಖಿ ದಾಸ್, ಬಝ್‌ಫೀಡ್‌ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

“ನಾನು ಹಾಕಿದ ಪೋಸ್ಟ್ ಸ್ತ್ರೀವಾದ ಮತ್ತು ನಾಗರಿಕ ಪಾಲ್ಗೊಳ್ಳುವಿಕೆಯ ಕುರಿತ ನನ್ನ ನಂಬಿಕೆಯನ್ನು ಪ್ರತಿಬಿಂಬಿಸುವುದಾಗಿತ್ತು. ಪೋಸ್ಟ್ ಬಂದ ಪ್ರತಿಕ್ರಿಯೆಯ ಪರಿಣಾಮವಾಗಿ ನಾನು ಪೋಸ್ಟ್ ಅನ್ನು ಅಳಿಸಿದ್ದೇನೆ. ಕಂಪನಿಯಲ್ಲಿನ ನನ್ನ ಮುಸ್ಲಿಂ ಸಹೋದ್ಯೋಗಿಗಳು ಸೇರಿದಂತೆ ಅದರಿಂದ ಯಾರಿಗಾದರು ನೋವು ಉಂಟಾಗಿದ್ದರೆ ಪ್ರಾಮಾಣಿಕವಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಕಂಪನಿಯ ಕೆಲವು ಮುಸ್ಲಿಂ ಉದ್ಯೋಗಿಗಳು ದಾಸ್ ಅವರ ಕ್ಷಮೆಯಾಚನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

“ಒಂದು ಕಂಪನಿಯಾಗಿ, ನಾವು ಈಗ ನಮ್ಮ ವೇದಿಕೆಯಲ್ಲಿ ಮುಸ್ಲಿಮರ ವಿರುದ್ಧ ದ್ವೇಷದ ಹೇಳಿಕೆ ಮತ್ತು ಇಸ್ಲಾಮೋಫೋಬಿಯಾದ ಪ್ರಾಮಾಣಿಕ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕಾಗಿದೆ ಎಂದು ಉದ್ಯೋಗಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಭಾರತದಲ್ಲಿ ಫೇಸ್‌ಬುಕ್‌ ಅನ್ನು ಇತ್ತೀಚೆಗೆ ದ್ವೇಷ ಹರಡಲು ಬಳಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಮಾತ್ರವಲ್ಲ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂಬ ದೂರು ಕೂಡ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಫೇಸ್‌ಬುಕ್ ಕೇಂದ್ರ ಕಚೇರಿಗೆ ಪತ್ರ ಬರೆದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಕಳೆದ ಶುಕ್ರವಾರ, ಫೇಸ್‌ಬುಕ್‌ ಈ ಬಗ್ಗೆ ಸ್ಪಷ್ಟನೆ ನೀಡಿತ್ತು.

“ಫೇಸ್‌ಬುಕ್ ಪಕ್ಷಾತೀತ ವೇದಿಕೆಯಾಗಿದ್ದು, ಜನರು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸಬಹುದು. ನಾವು ಪಕ್ಷಪಾತದ ಆರೋಪಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ದ್ವೇಷ ಮತ್ತು ಧರ್ಮಾಂಧತೆಯನ್ನು ಎಲ್ಲಾ ರೀತಿಯಲ್ಲೂ ಖಂಡಿಸುತ್ತೇವೆ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ” ಎಂದು ಫೇಸ್‌ಬುಕ್‌ನ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ಆನ್‌ಲೈನ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group