ರಾಷ್ಟ್ರೀಯ ಸುದ್ದಿ

“ಕಾರ್ಯಕ್ರಮದ ಬಳಿಕ ಕೊರೋನಾ ಹರಡಿದವರು ಎಂಬ ಹಣೆಪಟ್ಟಿ ಕೊಡುವುದು ಬೇಡ”; ಶಿಯಾಗಳ ಮೊಹರಂ ಮೆರವಣಿಗೆಗೆ ಅನುಮತಿ ನಿರಾಕರಿಸಿದ ಸುಪ್ರೀಂಕೋರ್ಟ್

ವರದಿಗಾರ (ಆ.27): ಮೊಹರಂ ಮೆರವಣಿಗೆಗೆ ಅನುಮತಿ ನೀಡಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. “ಕಾರ್ಯಕ್ರಮದ ಬಳಿಕ ಕೊರೋನಾ ಹರಡಿದವರು ಎಂಬ ಹಣೆಪಟ್ಟಿ ಕೊಡುವುದು ಬೇಡ” ಎಂದು ಸು.ಕೋರ್ಟ್ ಸಲಹೆ ನೀಡಿರುವುದಾಗಿ ಮೂಲಗಳು ವರದಿ ಮಾಡಿವೆ.

ಉತ್ತರ ಪ್ರದೇಶದ ಪ್ರಮುಖ ಶಿಯಾ ಮುಖಂಡ ಸೈಯದ್ ಕಲ್ಬೆ ಜವಾದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ‘ನಾವು ಯಾವುದೇ ಆದೇಶ ಹೊರಡಿಸಲು ಬಯಸುವುದಿಲ್ಲ. ಮನವಿ ಅರ್ಜಿಯನ್ನು ಪುರಸ್ಕರಿಸುವುದೂ ಇಲ್ಲ.’ ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಹೇಳಿದೆ.

ಆ. 30 ರಂದು ಮೊಹರಂ ಮೆರವಣಿಗೆ ನಡೆಸಲು ಶಿಯಾ ಪಂಥದ ಮುಸ್ಲಿಮರಿಗೆ ಅನುಮತಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿತ್ತು. ಅರ್ಜಿದಾರರು ಪುರಿ ರಥಯಾತ್ರೆಗೆ ಅನುಮತಿ ನೀಡಿರುವುದನ್ನು ಉಲ್ಲೇಖಿಸಿ, ನಮಗೂ ಇದೇ ಆಧಾರದಲ್ಲಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಆದರೆ, ಅದು ಒಂದು ಸೀಮಿತ ಜಾಗದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳದವರೆಗೆ ನಡೆದಿದೆ.  ಆದರೆ ನೀವು ಭಾರತದಾದ್ಯಂತ ಅನುಮತಿ ಕೋರುತ್ತಿದ್ದೀರಿ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ದೇಶಾದ್ಯಂತ ಮೊಹರಂ ಮೆರವಣಿಗೆಗಳನ್ನು ನಡೆಸುವುದು ಅನಗತ್ಯವಾಗಿ ಕೆಟ್ಟ ಹೆಸರನ್ನು ತರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಶಿಯಾಗಳು ಲಕ್ನೋದಲ್ಲಿ ಕೇಂದ್ರೀಕೃತವಾಗಿರುವುದರಿಂದ ಅಲ್ಲಿ ಅನುಮತಿ ನೀಡಬೇಕೆಂದು ಅರ್ಜಿದಾರರು ಮಾಡಿದ ಮನವಿಗೆ, ಅಲಹಾಬಾದ್ ಹೈಕೋರ್ಟ್ ಸಂಪರ್ಕಿಸುವಂತೆ ನ್ಯಾಯಾಲಯ ಸೂಚಿಸಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group