ರಾಷ್ಟ್ರೀಯ ಸುದ್ದಿ

‘UPSC ಜಿಹಾದ್’ ಎಂದ ಮತಾಂಧ ಪತ್ರಕರ್ತನ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ JMI

ಉನ್ನತ ಸಮಿತಿಯ ಸಭೆ ಕರೆದ JMI

ಪ್ರತಿ ವಿದ್ಯಾರ್ಥಿಗಳೂ ದೂರು ದಾಖಲಿಸಲು ಉಪಕುಲಪತಿ ಕರೆ

ವರದಿಗಾರ (ಆ.28): ಯುಪಿಎಸ್ಸಿ ಪರೀಕ್ಷೆಗಳ ಮೂಲಕ ಮುಸ್ಲಿಮರು ಸರ್ಕಾರದ ಆಡಳಿತದಲ್ಲಿ ಪ್ರವೇಶಿಸುವುದನ್ನು ಪ್ರಶ್ನಿಸಿ, ಪರೀಕ್ಷೆ ಪಾಸಾದ ಜಾಮಿಯಾ ವಿದ್ಯಾರ್ಥಿಗಳನ್ನು ಉಲ್ಲೇಖಿಸಿ “ಜಾಮಿಯಾ ಕಿ ಜಿಹಾದಿ” ಎಂದು ಕರೆದ ಟಿವಿ ಚಾನೆಲ್ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಕುರಿತು ಚರ್ಚಿಸಲು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಸಭೆ ಕರೆದಿದೆ.

ದುರುದ್ದೇಶಪೂರಿತ  ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಟಿವಿ ಚಾನೆಲ್ ವಿರುದ್ಧ ಕ್ರಮಕೈಗೊಳ್ಳುವಮಗಳ ಬಗ್ಗೆ ಚರ್ಚಿಸಲು ನಾವು ಸಭೆ ಕರೆದಿದ್ದೇವೆ. ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಾದ ಜಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಈ ದ್ವೇಷ ಹರಡಿದ ಚಾನೆಲ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಉಪಕುಲಪತಿ ನಜ್ಮಾ ಅಖ್ತರ್ ತಿಳಿಸಿದ್ದಾರೆ.

ಈ ವರ್ಷ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ 30 ವಿದ್ಯಾರ್ಥಿಗಳ ಪೈಕಿ ಶೆಕಡಾ 50ರಷ್ಟು ಅಭ್ಯರ್ಥಿಗಳು ಮುಸ್ಲಿಮೇತರರು ಎಂಬುದು ಅವರಿಗೆ ತಿಳಿದಿಲ್ಲ ಎಂದು ಅವರು ಹೇಳಿದರು.

ಸುದರ್ಶನ್ ನ್ಯೂಸ್ ಚಾನೆಲ್‌ನ ಪ್ರಧಾನ ಸಂಪಾದಕ ಸುರೇಶ್ ಚಾವಂಕೆ ಎಂಬವರು ಯುಪಿಎಸ್ಸಿ ಪರೀಕ್ಷೆಗಳ ಮೂಲಕ ಮುಸ್ಲಿಮರು ಸರ್ಕಾರಿ ಸೇವೆಗೆ ಪ್ರವೇಶಿಸುವುದನ್ನು ಪ್ರಶ್ನಿಸಿ, ಅದನ್ನು ಯುಪಿಎಸ್‌ಸಿ ಜಿಹಾದ್ ಎಂದು ಕರೆದಿದ್ದರು.

ಆಗಸ್ಟ್ 25 ರಂದು ಚಾವಂಕೆ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್ ಅನ್ನು ಟ್ಯಾಗ್ ಮಾಡಿ ಪ್ರೋಮೋವನ್ನು ಟ್ವೀಟ್ ಮಾಡಿದ್ದರು. 10 ಲಕ್ಷಕ್ಕೂ ಅಧಿಕ ಮಂದಿ ಇದನ್ನು ವೀಕ್ಷಿಸಿದ್ದಾರೆ.

ಐಎಎಸ್ ಅಧಿಕಾರಿಗಳ ಸಂಘ ಕೂಡ ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group