ರಾಷ್ಟ್ರೀಯ ಸುದ್ದಿ

ನೀಟ್‌, ಜೆಇಇ ಪರೀಕ್ಷೆ: ವಿದ್ಯಾರ್ಥಿಗಳ ಪರ ಧ್ವನಿ ಎತ್ತುವಂತೆ ರಾಹುಲ್ ಗಾಂಧಿ ದೇಶದ ಜನರಿಗೆ ಮನವಿ

ವರದಿಗಾರ (ಆ.28): ನೀಟ್‌ ಮತ್ತು ಜೆಇಇ ಪರೀಕ್ಷೆ ವಿಷಯದಲ್ಲಿ ದೇಶದ ಜನರು ವಿದ್ಯಾರ್ಥಿಗಳ ಪರ ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಶುಕ್ರವಾರ ದೇಶದ ಜನರೊಂದಿಗೆ ಮನವಿ ಮಾಡಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸಲು ಉದ್ದೇಶಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಶುಕ್ರವಾರ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ, ಕಷ್ಟದಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳೊಂದಿಗೆ ನಿಮ್ಮ ಧ್ವನಿಯನ್ನು ಸೇರಿಸಿ. ಬೆಳಿಗ್ಗೆ 10ರಿಂದ ವಿದ್ಯಾರ್ಥಿಗಳ ಸುರಕ್ಷತೆ ಪರ ಮಾತನಾಡಿ. ಸರ್ಕಾರವು ವಿದ್ಯಾರ್ಥಿಗಳಿಗೆ ಕಿವಿಗೊಡುವಂತೆ ಮಾಡೋಣ ಎಂದು ಮನವಿ ಮಾಡಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿನ  ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬರುವ ಸಮಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ  ಜೀವವನ್ನು ಅಪಾಯಕ್ಕೆ ದೂಡುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಬಿಜೆಪಿಯೇತರ ಮುಖ್ಯಮಂತ್ರಿಗಳು ಈಗಾಗಲೇ ಈ ವಿಷಯದಲ್ಲಿ ಸುಪ್ರೀಂಕೋರ್ಟ್‌ಗೆ ಹೋಗಲು ನಿರ್ಧರಿಸಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group