ರಾಜ್ಯ ಸುದ್ದಿ

ದೇವಸ್ಥಾನದ ಕಟ್ಟೆಯ ಮೇಲೆ ಮೇಲ್ಜಾತಿಯವರ ಸಮಾನಾಗಿ ಕುಳಿತ ಕಾರಣಕ್ಕೆ ವಿಜಯಪುರದಲ್ಲಿ ದಲಿತ ಯುವಕನ ಹತ್ಯೆ; ಕರ್ನಾಟಕದಲ್ಲೊಂದು ತಲೆತಗ್ಗಿಸುವ ಘಟನೆ

ವರದಿಗಾರ (ಆ.28): ದೇವಸ್ಥಾನದ ಕಟ್ಟೆಯ ಮೇಲೆ ಮೇಲ್ಜಾತಿಯವರ ಸಮಾನಾಗಿ ಕುಳಿತ ಕಾರಣಕ್ಕೆ ದಲಿತ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಪಿ.ಎಚ್.ಗ್ರಾಮದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬೂದಿಹಾಳ ಪಿ.ಎಚ್. ಗ್ರಾಮದ ನಿವಾಸಿ ಅನಿಲ್ ಇಂಗಳಗಿ (26) ಕೊಲೆಯಾದ ದಲಿತ ಯುವಕ. ಅದೇ ಗ್ರಾಮದ ಸಿದ್ದು ಬಿರಾದಾರ್ ಹಾಗೂ ಆತನ ಸಂಬಂಧಿ ಸಂತೋಷ್ ಕೊಲೆ ಆರೋಪಿಗಳು.

ಕೆಲವು ದಿನಗಳ ಹಿಂದೆ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಕಟ್ಟೆಯ ಮೇಲೆ ಮೇಲ್ಜಾತಿಯವರು ಕುಳಿತಿದ್ದರು. ಅದೇ ಕಟ್ಟಯ ಮತ್ತೊಂದು ಕಡೆ ಅನಿಲ್ ಕೂಡ ಕುಳಿತುಕೊಂಡಿದ್ದಾನೆ. ಇದನ್ನು ಪ್ರಶ್ನಿಸಿದ ಸಿದ್ದು ಬಿರಾದಾರ್ ಮತ್ತು ಆತನ ಸಂಗಡಿಗರು, ಅನಿಲ್ ಜೊತೆ ಜಗಳ ಮಾಡಿದ್ದರು. ಇದೇ ದ್ವೇಷದ ಹಿನ್ನೆಲೆಯಿಂದ ಸಿದ್ದು ಬಿರಾದಾರ್ ಹಾಗೂ ಸಂತೋಷ್ ಇಬ್ಬರು ಸೇರಿ ಅನಿಲ್ನನ್ನು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಅನಿಲ್ ಮೃತದೇಹವನ್ನು ಸಿಂದಗಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇಟ್ಟು ಸಂಬಂಧಿಕರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ದಲಿತ ಯುವಕನ ಹತ್ಯೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು, ಮುಖ್ಯಮಂತ್ರಿಗಳು ತಕ್ಷಣ ಆರೋಪಿಗಳನ್ನು ಬಂಧಿಸಿ ಆತನ ವಿರುದ್ಧ ಕಾನೂನು ಕ್ರಮಕ್ಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಸರಕಾರ ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ.  ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ,‌ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ  ಬಿಜೆಪಿ ಸರಕಾರ ಬೆಂಬಲ ನೀಡುತ್ತಿದ್ದುದರಿಂದ ಇಂತಹ ಕೊಲೆಗಡುಕರು ನಿರ್ಭಯವಾಗಿ ಈ ರೀತಿಯ ದುಷ್ಕೃತ್ಯಕ್ಕೆ ಇಳಿಯಲು ಕಾರಣವಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಬಾಯಲ್ಲಿ ಸಮಾನತೆಯ ಮಂತ್ರ ಆದರೆ ಆಚರಣೆಯಲ್ಲಿ ಅಸಮಾನತೆಯ ಕುತಂತ್ರ ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group