ರಾಜ್ಯ ಸುದ್ದಿ

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ; ನಷ್ಟ ವಸೂಲಿಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ನೇತೃತ್ವದಲ್ಲಿ ಕ್ಲೈಮ್ ಕಮಿಷನ್ ನೇಮಕ

ವರದಿಗಾರ (ಆ.28): ಪ್ರವಾದಿ ನಿಂದನೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಇತ್ತೀಚಿನ ನಡೆದ ಗಲಭೆಯಲ್ಲಿ ಉಂಟಾಗಿರುವ ಸಾರ್ವಜನಿಕರು ಮತ್ತು ಸರ್ಕಾರಿ ಆಸ್ತಿಗಳ ಹಾನಿಯನ್ನು ಅಂದಾಜಿಸಿ, ಪರಿಹಾರ ವಿತರಣೆ ಕುರಿತು ನಿರ್ಧಾರ ಕೈಗೊಳ್ಳಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎಸ್‌.ಕೆಂಪಣ್ಣ ನೇತೃತ್ವದಲ್ಲಿ ಕ್ಲೈಮ್‌ ಕಮಿಷನ್‌ ನೇಮಿಸಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಕ್ಲೈಮ್‌ ಕಮಿಷನರ್‌ ನೇಮಕದ ಕುರಿತು ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಬೇಕು. ಅವರು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಾಗಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಮಾನವನ್ನು ಪರಿಗಣಿಸಿ, ಅದಕ್ಕೆ ತಕ್ಕ ಗೌರವ ಧನ ನಿಗದಿಪಡಿಸಬೇಕು. ಜೊತೆಗೆ, ಹಾಲಿ ನ್ಯಾಯಮೂರ್ತಿಗಳಿಗೆ ದೊರೆಯುವ ಗೌರವ, ಸೌಕರ್ಯಗಳನ್ನು ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ಪೀಠ ಆದೇಶದಲ್ಲಿ ತಿಳಿಸಿದೆ.

ಘಟನೆಯಲ್ಲಿ ಹಾನಿಗೊಳಗಾದವರಿಗೆ, ಆರೋಪಿಗಳಿಂದಲೇ ಪರಿಹಾರ ಕೊಡಿಸಬೇಕು ಮತ್ತು ತನಿಖೆಯನ್ನು ಸೂಕ್ತ ಏಜೆನ್ಸಿಗೆ ವರ್ಗಾಯಿಸಬೇಕು ಎಂಬಿತ್ಯಾದಿ ಮನವಿಗಳನ್ನು ಹೊಂದಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ, ಈ ಮಧ್ಯಂತರ ಆದೇಶ ನೀಡಿದೆ.

ಘಟನೆಯ ಗಂಭೀರತೆಯನ್ನು ಅರಿತು, ಸರ್ಕಾರ  ಕ್ಲೈಮ್ ಆಯುಕ್ತರಿಗೆ ಕರ್ತವ್ಯ ನಿರ್ವಹಿಸಲು ಅಗತ್ಯವಿರುವ ಕಚೇರಿ, ಪೀಠೋಪಕರಣ, ಪ್ರಿಂಟರ್‌, ಎಸಿ, ವಾಹನಗಳು ಸೇರಿದಂತೆ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಬೇಕು. ಅಗತ್ಯ ಸಿಬ್ಬಂದಿ ಒದಗಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group