ರಾಷ್ಟ್ರೀಯ ಸುದ್ದಿ

‘ಯುಪಿಎಸ್‌ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಿದ ದೆಹಲಿ ಹೈಕೋರ್ಟ್‌

ಸುದರ್ಶನ ಸುದ್ದಿವಾಹಿನಿಯ ಸಂಪಾದಕ ಸುರೇಶ್ ಚವಾಂಕೆಗೆ ಮುಖಭಂಗ

ವರದಿಗಾರ (ಆ.29): ನಾಗರಿಕ ಸೇವೆಗಳಲ್ಲಿ ಮುಸ್ಲಿಮರ ಸೇರ್ಪಡೆಯನ್ನು ಪ್ರಶ್ನಿಸಿ ‘ಯುಪಿಎಸ್‌ಸಿ ಜಿಹಾದ್’ ಎಂಬ ಹೆಸರಿನಲ್ಲಿ ಸುದರ್ಶನ ಸುದ್ದಿವಾಹಿನಿಯ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾ.ನವೀನ ಚಾವ್ಲಾ ಅವರ ಏಕ ನ್ಯಾಯಾಧೀಶ ಪೀಠವು ಈ ಆದೇಶವನ್ನು ನೀಡಿದೆ.
ಸುದರ್ಶನ ಸುದ್ದಿವಾಹಿನಿಯ ಸಂಪಾದಕ ಸುರೇಶ್ ಚವಾಂಕೆ ಆ.26ರಂದು ‘ಯುಪಿಎಸ್‌ಸಿ ಜಿಹಾದ್’ ಹ್ಯಾಷ್‌ಟ್ಯಾಗ್‌ನೊಂದಿಗೆ ಶೇರ್ ಮಾಡಿಕೊಂಡ ಕಾರ್ಯಕ್ರಮದ ಪ್ರೊಮೋಕ್ಕೆ ಸಾರ್ವಜನಿಕ ವಲಯದಲ್ಲಿ, ಅಧಿಕಾರಿಗಳ ವಲಯದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಮುಂದೆ ಪ್ರಸಾರವಾಗುವ ಕಾರ್ಯಕ್ರಮದ ಪ್ರೋಮೋವನ್ನು ಟ್ವೀಟ್ ಮಾಡಿದ್ದ ಚವಾಂಕೆ ಇದು ನಾಗರಿಕ ಸೇವೆಗಳಲ್ಲಿ ಮುಸ್ಲಿಮರು ಹೇಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸುವುದಾಗಿ ಹೇಳಿದ್ದರು.

ಜಾಮಿಯಾದಲ್ಲಿ ತರಬೇತಿ ಪಡೆದು ಯುಪಿಎಸ್‌ಸಿ ಪರೀಕ್ಷೆಗಳಲ್ಲಿ ತೇರ್ಗಡೆಗೊಳ್ಳುವವರನ್ನು ‘ಜಾಮಿಯಾ ಕೆ ಜಿಹಾದಿ’ಗಳೆಂದು ಕರೆದು ಅವಮಾನಿಸಿದ್ದರು. ಯುಪಿಎಸ್‌ಸಿ ಅಭ್ಯರ್ಥಿಗಳನ್ನು ಈ ರೀತಿಯಾಗಿ ಕರೆದುದಕ್ಕೆ ಐಎಎಸ್‌ ಅಧಿಕಾರಿಗಳ ವಲಯದಲ್ಲೂ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಜಾಮಿಯಾ ಕೂಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕ್ರಮಕೈಗೊಳ್ಳುವಂತೆ ಆಗ್ರಹಿಸಿತ್ತು. ಮಾತ್ರವಲ್ಲ ಹಲವು ಸಂಘಟನೆಗಳು ಕೂಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದವು

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group