ರಾಜ್ಯ ಸುದ್ದಿ

ಬೆಂಗಳೂರು: 2 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟು ಬಾಲಕನ ಅಪಹರಿಸಿದ ಕಿರಾತಕರು

ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿ, ಮಗುವನ್ನು ರಕ್ಷಿಸಿದ ಬೆಂಗಳೂರು ಪೊಲೀಸರು

ವರದಿಗಾರ (ಆ.29): ಬಟ್ಟೆ ವ್ಯಾಪಾರಿಯೊಬ್ಬರ 11 ವರ್ಷದ ಮಗನನ್ನು ಅಪಹರಿಸಿ 2 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ 6 ಮಂದಿ ಅಪಹರಣಕಾರನ್ನು ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಕೇವಲ 16 ಗಂಟೆಗಳಲ್ಲಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿ ಮಗುವನ್ನು ಸುರಕ್ಷಿತವಾಗಿ ಪೋಷಕರ ಮಡಿಲಿಗೆ ಒಪ್ಪಿಸಿದ್ದಾರೆ.

ಫಾಹೀಂ, ಮುಜಾಮಿಲ್, ಫೈಜಾನ್, ಮುಹಮ್ಮದ್ ಶಾಹೀದ್, ಖಲೀಲ್ ಬಂಧಿತ ಆರೋಪಿಗಳು. ಮುಖ್ಯ  ಆರೋಪಿ ಮುಹಮ್ಮದ್ ಝೈನ್ ನನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ಪೊಲೀಸರ ಮೇಲೆ  ಆತ ಹಲ್ಲೆ ನಡೆಸಿದ್ದು, ಆಗ ಆತ್ಮರಕ್ಷಣೆಗಾಗಿ ಭಾರತೀನಗರ ಪೊಲೀಸ್ ಇನ್ಸ್ ಪೆಕ್ಟರೆ್ ಗುಂಡು  ಹಾರಿಸಿದ್ದಾರೆ. ಆರೋಪಿಯ ಬಲಗಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದಾನೆ. ಉಳಿದ ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group