ರಾಷ್ಟ್ರೀಯ ಸುದ್ದಿ

ಅನ್‌ಲಾಕ್‌-4 ಮಾರ್ಗಸೂಚಿ ಪ್ರಕಟ: ಸೆಪ್ಟಂಬರ್ 30ರವರೆಗೆ ಶಾಲೆ ತೆರೆಯುವಂತಿಲ್ಲ; ಸೆ.7ರಿಂದ ಮೆಟ್ರೋ ಸಂಚಾರ

ವರದಿಗಾರ (ಆ.29): ಅನ್‌ಲಾಕ್‌-4 ಮಾರ್ಗಸೂಚಿಯನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದ್ದು,  ಕಂಟೇನ್ಮೆಂಟ್ ವಲಯ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಆದರೆ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳು, ತರಬೇತಿ ಸಂಸ್ಥೆಗಳು ಸೆಪ್ಟೆಂಬರ್ 30ರವರೆಗೆ ತೆರೆಯುವಂತಿಲ್ಲ. ಆದರೆ ಆನ್‌ಲೈನ್, ದೂರಶಿಕ್ಷಣ ವ್ಯವಸ್ಥೆ ಮುಂದುವರಿಯಲಿದೆ.

9ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಶಾಲೆಗೆ ಭೇಟಿ ನೀಡಿ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಬಹುದು. ಸೆಪ್ಟಂಬರ್ 7ರಿಂದ ಮೆಟ್ರೋ ರೈಲು ಸಂಚಾರಕ್ಕೆ ಅನುಮತಿಸಲಾಗಿದೆ. ಕೊರೊನಾ ನಿಯಮಗಳನ್ನು ಪಾಲಿಸಿ ಸೆಪ್ಟಂಬರ್ 21ರಿಂದ  ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ, ರಾಜಕೀಯ ಸಭೆ ಸಮಾರಂಭಗಳನ್ನು ನಡೆಸಲು ಅನುಮತಿಸಲಾಗಿದೆ. ಆದರೆ 100 ಜನರಿಗಿಂತ ಹೆಚ್ಚಿಗೆ ಸಾರ್ವಜನಿಕರು ಸೇರಬಾರದು ಎಂಬ ನಿಬಂಧನೆ ವಿಧಿಸಲಾಗಿದೆ. ಸೆಪ್ಟಂಬರ್ 20ರ ಬಳಿಕ  ಮದುವೆ ಸಮಾರಂಭಗಳಿಗೆ ನಿಗದಿಪಡಿಸಿದ್ದ ಜನರ ಸಂಖ್ಯೆಯನ್ನು 100ಕ್ಕೆ ಏರಿಸಲಾಗಿದೆ. ಅಂತಾರಾಜ್ಯ ಮತ್ತು ಅಂತರ್ ಜಿಲ್ಲೆಗಳ ನಡುವೆ ಸಂಚರಿಸಲು ಯಾವುದೇ ನಿರ್ಬಂಧಗಳಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group