ರಾಷ್ಟ್ರೀಯ ಸುದ್ದಿ

ಉತ್ತರಪ್ರದೇಶ: ಪ್ರೀತಿಸಿದ ಕಾರಣಕ್ಕೆ ದಲಿತ ಜೋಡಿಯ ತಲೆಬೋಳಿಸಿ ಮೆರೆವಣಿಗೆ ನಡೆಸಿದ ಗ್ರಾಮಸ್ಥರು

ವರದಿಗಾರ(ಆ.30): ಪರಸ್ಪರ ಪ್ರೀತಿಸುತಿದ್ದಾರೆ ಎಂಬ ಏಕೈಕ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ಕೊತ್ವಾಲಿ, ಮೈನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಪುರುಷ ಮತ್ತು ಮಹಿಳೆಯನ್ನು ಸಾರ್ವಜನಿಕವಾಗಿ ನಡುಬೀದಿಯಲ್ಲಿ ಹಲ್ಲೆಗೈದು, ತಲೆಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿರುವ ಮೃಗೀಯ ಘಟನೆ ನಡೆದಿದೆ.

40 ವರ್ಷ ಪ್ರಾಯದ ಪುರುಷ ಮತ್ತು 35 ವರ್ಷದ ಮಹಿಳೆಯ ನಡುವೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿ ಈ ಕೃತ್ಯವೆಸಲಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರಿಬ್ಬರಿಗೂ ಮುಖಕ್ಕೆ ಮಸಿ ಬಳಿದು ಹಲ್ಲೆ ನಡೆಸುತ್ತಿರುವ ದೃಶ್ಯ ವೀಡಿಯೋದಲ್ಲಿದೆ. ಸುತ್ತಲೂ ದೊಣ್ಣೆ, ಬಡಿಗೆ ಹಿಡಿದು ನಿಂತಿರುವ ಜನರು, ಮಹಿಳೆ ಗೋಗರೆಯುತ್ತಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿರುವುದು ವೀಡಿಯೋದಲ್ಲಿ ಕಂಡುಬರುತ್ತದೆ.

ಈ ವಿಡಿಯೋವನ್ನು ನೋಡಿದ ತಕ್ಷಣ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು  ಮೈನ್‌ಪುರಿ ಪೊಲೀಸ್ ಅಧಿಕಾರಿಯೊಬ್ಬರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group