ರಾಜ್ಯ ಸುದ್ದಿ

ಗೋಮಾಂಸ ರಫ್ತು ನಿಷೇಧವಾಗಲಿ: ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಸಚಿವ ಡಾ.ಕೆ.ಸುಧಾಕರ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೀಫ್ ರಫ್ತಿನಲ್ಲಿ ಹೆಚ್ಚಳ!

ವರದಿಗಾರ (ಆ.30): ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೀಫ್ ರಫ್ತು ಹೆಚ್ಚಾಗಿದೆ ಎಂಬ ವರದಿ ಪ್ರಕಟಗೊಂಡ ಬೆನ್ನಲ್ಲೇ, ಗೋಮಾಂಸ ರಫ್ತು ನಿಷೇಧಿಸಬೇಕು ಎಂಬ ಕೂಗು ಬಿಜೆಪಿ ಪಕ್ಷದೊಳಗಿನಿಂದಲೇ ಕೇಳಿಬರುತ್ತಿದೆ.

ಚಿಕ್ಕಬಳ್ಳಾಪುರದಲ್ಲಿಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಗೋಮಾಂಸ ರಫ್ತು ನಿಷೇಧವಾಗಬೇಕು. ಗೋಹತ್ಯೆಯನ್ನು ಎಲ್ಲ ಸರ್ಕಾರಗಳು ನಿಷೇಧಿಸಬೇಕು. ಅದೇ ರೀತಿ ಗೋಮಾಂಸದ ರಫ್ತನ್ನು ಕೂಡ ನಿಷೇಧಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗೋಮಾಂಸ ರಫ್ತು ನಿಷೇಧಕ್ಕೆ ಎರಡೂ ಸದನಗಳಲ್ಲಿ ಸಾಕಷ್ಟು ಚರ್ಚೆಯಾಗಬೇಕಿದೆ. ನಮ್ಮ ಪಕ್ಷ ಈ ವಿಚಾರದಲ್ಲಿ ದೃಢ ಸಂಕಲ್ಪ ಹೊಂದಿದೆ. ಶೀಘ್ರದಲ್ಲೇ ರಫ್ತು ನಿಷೇಧ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋ ಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ. ಜೊತೆಗೆ ಜಾಗೃತಿ ಆಂದೋಲನ ಕೂಡ ಮಾಡಲಾಗುವುದು ಎಂದು ಸುಧಾಕರ್ ಹೇಳಿದ್ದಾರೆ.

ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ  ವೆಂಕಟೇಶ್ವರ ಗೋಶಾಲೆ ಉದ್ಘಾಟಿಸಿ ಅವರು ಮಾತನಾಡಿದರು.

ಪಾಶ್ಚಾತ್ಯ ದೇಶಗಳಲ್ಲಿ ನಾಲಿಗೆ ಚಪಲಕ್ಕೆ ಏನು ಬೇಕಾದರೂ ತಿನ್ನುತ್ತಾರೆ. ಆದರೆ ಭಾರತೀಯರಾಗಿ ನಾವು ಗೋಹತ್ಯೆ ಮಾಡಬಾರದು. ಇದನ್ನು ನಾನು ಬಲವಾಗಿ ವಿರೋಧಿಸುತ್ತೇನೆ. ಭಾರತೀಯ ಸಂಪ್ರದಾಯದಲ್ಲಿ ಗೋವಿಗೆ ವಿಶೇಷ ಸ್ಥಾನಮಾನವಿದೆ. ವಯಸ್ಸಾಗಿದೆ ಎಂಬ ಕಾರಣಕ್ಕೆ ಹಸುವನ್ನು ಮಾರಾಟ ಮಾಡಬಾರದು. ಹಸು ಮನುಷ್ಯನಿಗೆ ಎಲ್ಲವನ್ನೂ ನೀಡುವ ಕಾಮಧೇನುವಾಗಿದೆ. ಆದ್ದರಿಂದ ಗೋಹತ್ಯೆ ಮಾಡಬಾರದು ಎಂದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group