ರಾಷ್ಟ್ರೀಯ ಸುದ್ದಿ

1000 ರೂ. ನೋಟುಗಳ ಮರು ಚಲಾವಣೆಯ ಯೋಜನೆಯಿಲ್ಲ : ಸರಕಾರ ಸ್ಪಷ್ಟನೆ

ವರದಿಗಾರ-ದೆಹಲಿ:ಹೊಸದಾಗಿ 200 ರೂಪಾಯಿ ನೋಟುಗಳು ಚಲಾವಣೆಗೆ ಬಂದ ಕೆಲವೇ ದಿನಗಳಲ್ಲಿ ಸರಕಾರವು 1000 ರೂಪಾಯಿಗಳ ನೋಟಿನ ಮರು ಚಲಾವಣೆ ಯೋಜನೆಯ ಮಾಧ್ಯಮ ವರದಿಗಳನ್ನು ಅಲ್ಲಗಳೆದಿದೆ.

ಸದ್ಯದಲ್ಲಿ 1000 ರೂಪಾಯಿಗಳ ನೋಟನ್ನು ಮರು ಚಲಾವಣೆಗೆ ತರುವ ಯಾವುದೇ ಯೋಜನೆಗಳಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್ ತಿಳಿಸಿದ್ದಾರೆ. ರೂ.1000 ನೋಟಿನ ಮುದ್ರಣಕ್ಕೆ RBI ನ ಎರಡು ಮುದ್ರಣಾಲಯಗಳನ್ನು ಆಯ್ಕೆ ಮಾಡಲಾಗಿದೆ ಎಂಬ ಮಾಧ್ಯಮ ವರದಿಗಳ ಹಿನ್ನಲೆಯಲ್ಲಿ, ಈ ಬಗ್ಗೆ ಸರಕಾರದ ಯಾವುದೇ ಯೋಜನೆಗಳಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಕಳೆದ ವರ್ಷ ನವೆಂಬರ್ 8ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಳೆಯ ರೂ.500 ಹಾಗೂ ರೂ.1000ದ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದರು. ಕಪ್ಪು ಹಣ, ನಕಲಿ ನೋಟುಗಳು ಹಾಗೂ ಭಯೋತ್ಪಾದನೆಗಿರುವ ಹಣಕಾಸು ನೆರವನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದರು.

ನಂತರ ರೂ. 2000 ಹಾಗೂ ರೂ.500 ಹೊಸ ನೋಟುಗಳನ್ನು ಚಲಾವಣೆಗೆ ತರಲಾಗಿತ್ತು. ಆಗಸ್ಟ್ 25ರಂದು ಭಾರತೀಯ ರಿಸರ್ವ್ ಬ್ಯಾಂಕ್ 200 ರೂಪಾಯಿಗಳ ನೋಟನ್ನು ಬಿಡುಗಡೆಗೊಳಿಸಿದೆ. ಅದಲ್ಲದೆ, ಇದೇ ತಿಂಗಳಲ್ಲಿ ರೂ.50 ಹೊಸ ನೋಟುಗಳನ್ನೂ ಚಲಾವಣೆಗೆ ತರಲಾಗಿದೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group