ರಾಷ್ಟ್ರೀಯ ಸುದ್ದಿ

ಆಂಬುಲೆನ್ಸ್ ಚಾಲಕನಿಗೆ ಕೊರೊನಾ:  ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಮನೆಯಲ್ಲೇ ಸಾವು

ವರದಿಗಾರ (ಆ.30): ಕೊರೊನಾ ಸೋಂಕಿತರನ್ನು ಜೀವದ ಹಂಗು ತೊರೆದು ಆಸ್ಪತ್ರೆಗೆ ಕೊಂಡೊಯ್ಯುವ 108 ಆಂಬುಲೆನ್ಸ್ ಚಾಲಕರೊಬ್ಬರು ಕೊರೊನಾಗೆ ತುತ್ತಾಗಿ ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಮನೆಯಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ತೆಲಂಗಾಣದ ಕೊಥೆಗುಡಂ ಎಂಬಲ್ಲಿ ಈ ಘಟನೆ ನಡೆದಿದ್ದು, 37 ವರ್ಷದ ಜಲ್ಲಾ ಜಾನಕಿರಾಮ್ ಮೃತಪಟ್ಟ ಆಂಬುಲೆನ್ಸ್ ಚಾಲಕ. ನೂರಾರು ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಿದ್ದ ಅವರು ರೋಗಪೀಡಿತರಾದಾಗ ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ದೊರಕದಿರುವುದು ದುರದೃಷ್ಟಕರ ಸಂಗತಿ ಎಂದು ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಅವರಿಗೆ ಸಕಾಲಕ್ಕೆ ಆಂಬುಲೆನ್ಸ್ ಮಾತ್ರವಲ್ಲ ಅವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿ ಅವರಿಗೆ ಹಾಸಿಗೆ ಕೂಡ ಸಿಗಲಿಲ್ಲ. ಅವರಿಗೆ ಮಂಗಳವಾರ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಆಗ ಅವರು ಕೆಲಸ ಮಾಡುವ ಆಸ್ಪತ್ರೆಯವರು, ಇಲ್ಲಿ ಬೆಡ್ ವ್ಯವಸ್ಥೆ ಇಲ್ಲ, ನೀವು ಮನೆಯಲ್ಲೇ ಐಸೋಲೇಷನ್‌ನಲ್ಲಿ ಇರಿ ಎಂದು ಸಲಹೆ ನೀಡಿದ್ದರು. ಆಂಬುಲೆನ್ಸ್‌ಗೆ ಕಾದು ಕಾದು ಸುಸ್ತಾದ ಜಾನಕಿರಾಮ್ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ.  ಅವರು ಪತ್ನಿ ಮತ್ತು ಇಬ್ಬರು ಮಕ್ಕಳು, ಪೋಷಕರನ್ನು ಅಗಲಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group