ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ: ಚಲಿಸುತ್ತಿದ್ದ ಬಸ್‌ನಲ್ಲೇ ಮಹಿಳೆಯ ಮೇಲೆ ಅತ್ಯಾಚಾರ

ವರದಿಗಾರ (ಆ.31): ಚಲಿಸುತ್ತಿದ್ದ ಡಬಲ್ ಡೆಕ್ಕರ್ ಬಸ್‌ನಲ್ಲಿ ದೆಹಲಿ ಮೂಲದ 30 ವರ್ಷದ ಮಹಿಳೆಯ ಮೇಲೆ ಬಸ್‌ನ ಕ್ಲೀನರ್ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ಮಹಿಳೆ ಉತ್ತರ ಪ್ರದೇಶದಿಂದ ದೆಹಲಿಗೆ ಬರುವಾಗ ಈ ಘಟನೆ ನಡೆದಿದೆ. ಬಸ್ಸಿನಲ್ಲಿ 45 ಪ್ರಯಾಣಿಕರಿದ್ದರು. ತಾನು ಮಲಗಿದ್ದಾಗ ಈ ಕೃತ್ಯವೆಸಗಲಾಗಿದೆ ಎಂದು ಮಹಿಳೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಸ್‌ ಮಥುರಾದ ಮಾಂತ್ ಟೋಲ್ ಕೇಂದ್ರದ ಬಳಿ ಬಂದಾಗ ಮಹಿಳೆ ಈ ವಿಷಯವನ್ನು ಇತರರಿಗೆ ತಿಳಿಸಿದ್ದಾರೆ. ಬಳಿಕ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ವಿಷಯ ತಿಳಿಸಲಾಗಿದೆ.

ಆರೋಪಿ ರವಿ ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ನಡೆಸಿ ಅವರ ಮನೆಗೆ ಸುರಕ್ಷಿತವಾಗಿ ತಲುಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಂತ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಠಾಣಾಧಿಕಾರಿ ಭೀಮ್ ಸಿಂಗ್ ತಿಳಿಸಿದ್ದಾರೆ.

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group