ರಾಷ್ಟ್ರೀಯ ಸುದ್ದಿ

ನ್ಯಾಯಾಂಗ ಕುರಿತು ಟ್ವೀಟ್ ಮಾಡಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್‌ಗೆ 1 ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್

ತಪ್ಪಿದರೆ 3 ತಿಂಗಳ ಜೈಲು, 3 ವರ್ಷ ವಕೀಲಿಕೆ ನಿರ್ಬಂಧ ಶಿಕ್ಷೆ

ವರದಿಗಾರ, (ಆ.31): ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂಕೋರ್ಟ್ ಸೋಮವಾರ ಒಂದು ರೂಪಾಯಿ ದಂಡ ವಿಧಿಸಿದೆ.

ಸೆಪ್ಟಂಬರ್ 15ರೊಳಗೆ ಒಂದು ರೂಪಾಯಿ ದಂಡ ಪಾವತಿಸಬೇಕು, ಇಲ್ಲದಿದ್ದರೆ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ ಮೂರು ವರ್ಷ ವಕೀಲಿಕೆ ನಡೆಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್. ಗವಾಯಿ, ಕೃಷ್ಣ ಮುರಾರಿ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠ ಈ ತೀರ್ಪು ಪ್ರಕಟಿಸಿದೆ.

ಪ್ರಶಾಂತ್ ಭೂಷಣ್ ಅವರು  ಜೂನ್ 29ರಂದು ನ್ಯಾಯಾಂಗದ ಬಗ್ಗೆ ಮಾಡಿದ್ದ ಟ್ವೀಟ್‌ ನ್ಯಾಯಾಂಗ ನಿಂದನೆ ಎಂದು ಆಗಸ್ಟ್ 14ರಂದು ಹೇಳಿದ್ದ ಸುಪ್ರೀಂಕೋರ್ಟ್ ಇಂದು ಈ ಸಂಬಂಧ ಶಿಕ್ಷೆ ಪ್ರಕಟಿಸುವುದಾಗಿ ತಿಳಿಸಿತ್ತು.

ಈ ಹಿಂದಿನ ವಿಚಾರಣೆಯ ವೇಳೆ ತಾವು ಮಾಡಿದ ಟ್ವೀಟ್‌ಗೆ ಬದ್ಧ. ಈ ಸಂಬಂಧ ಕ್ಷಮೆ ಕೋರುವುದಿಲ್ಲ ಎಂದು ಪ್ರಶಾಂತ್ ಭೂಷಣ್ ಹೇಳಿದ್ದರು. ಆದಾಗ್ಯೂ ನ್ಯಾಯಾಲಯ ಕ್ಷಮೆ ಕೋರಲು ಆಗಸ್ಟ್ 24ರವರೆಗೆ ಕಾಲಾವಕಾಶ ನೀಡಿತ್ತು. ಆದರೆ ಪ್ರಶಾಂತ್ ಭೂಷಣ್, ತಾವು ಕ್ಷಮೆ ಕೋರುವುದಿಲ್ಲ ಎಂದು ಪುನರುಚ್ಚರಿಸಿದ್ದರು.

ಈ ಮಧ್ಯೆ ದೇಶದ ಚಿಂತಕರು, ಹಿರಿಯ ವಕೀಲರು ಹಾಗೂ ಹೆಚ್ಚಿನ ಸಂಖ್ಯೆ ಸಾರ್ವಜನಿಕರು ಪ್ರಶಾಂತ್ ಭೂಷಣ್‌ ಬೆಂಬಲಕ್ಕೆ ನಿಂತು, ಪ್ರಶಾಂತ್ ಭೂಷಣ್ ಅವರ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಒತ್ತಾಯಿಸಿದ್ದರು.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group