ರಾಜ್ಯ ಸುದ್ದಿ

ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ‌ ಮೋಸಗೊಳಿಸಿದ ಪರಿಣಾಮ ಕೊರೊನಾ ಹೆಚ್ಚಳ:ಮೋದಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ವರದಿಗಾರ (ಆ.30): ಗಂಟೆ ಬಾರಿಸಿ.,ಚಪ್ಪಾಳೆ ತಟ್ಟಿ., ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ‌ ಮೋಸಗೊಳಿಸಿದ ಪರಿಣಾಮವಿದು..! ಬಿಜೆಪಿ ಘೋಷಿತ ‘ವಿಶ್ವಗುರು’ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು ಇನ್ಯಾವ ಅಸ್ತ್ರಗಳಿದ್ದಾವೋ..? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 35 ಲಕ್ಷ ದಾಟಿದ್ದನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಅವರು, ಕೆಲವ ದಿನಗಳಲ್ಲಿ ವಿಶ್ವದಲ್ಲೇ 1ನೆ ಸ್ಥಾನಕ್ಕೆ ಭಾರತ ಏರುವುದು ನಿಸ್ಸಂದೇಹ. ಜನಸಂಖ್ಯೆ ಹೆಚ್ಚಿರುವುದರಿಂದ ಇದು ಆಶ್ಚರ್ಯಕರ ಸಂಗತಿ ಅಲ್ಲ. ಆದರೆ ನೆರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ವೈಫಲ್ಯ ಸ್ಪಷ್ಟವಾಗುತ್ತದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಬರ್ಮಾ, ಶ್ರೀಲಂಕಾ, ಅಫಘಾನಿಸ್ತಾನ, ಭೂತಾನ್, ಚೀನಾ ದೇಶಗಳು ನಮಗಿಂತ ಉತ್ತಮ ಸ್ಥಿತಿಯಲ್ಲಿವೆ ಎಂದು ಅವರು ಹೇಳಿದ್ದಾರೆ.

ಜಗತ್ತಿನ ಕೊರೊನಾ ಸೋಂಕಿನ ಪ್ರಕರಣಗಳಿಗೆ ಹೋಲಿಸಿದರೆ ಭಾರತದಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ ಸಾವಿನ ಪ್ರಮಾಣ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ದನ್ ಹೇಳುತ್ತಾರೆ.

ಆದರೆ ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ದೇಶಗಳಿಗೆ ಹೋಲಿಸಿದರೆ ಭಾರತ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ನಮ್ಮನ್ನು ನಾವೇ ಮರುಳು ಮಾಡಿಕೊಳ್ಳಬಾರದು, ಭಾರತ ವಿಪತ್ತಿನತ್ತ ಸಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group