ರಾಜ್ಯ ಸುದ್ದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ ಹಿನ್ನೆಲೆ; ರಾಜ್ಯಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ

ವರದಿಗಾರ (ಆ.31): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನವದೆಹಲಿಯಲ್ಲಿಂದು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಅವರ ಗೌರವಾರ್ಥ ಆಗಸ್ಟ್ 31ರಿಂದ ಸೆಪ್ಟಂಬರ್ 6ರವರೆಗೆ ಏಳು ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ.

ಈ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲಾಗುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ರಾಜ್ಯ ಶಿಷ್ಟಾಚಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮುಹಮ್ಮದ್ ನಯೀಮ್ ಮೊಮಿನ್ ಆದೇಶದಲ್ಲಿ ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group