ರಾಷ್ಟ್ರೀಯ ಸುದ್ದಿ

ಈಶಾನ್ಯ ದೆಹಲಿ ಹಿಂಸಾಚಾರ; ಜೆಎನ್‌ಯು ವಿದ್ಯಾರ್ಥಿನಿ ದೇವಾಂಗನಾ ಕಲಿತಾಗೆ ಜಾಮೀನು ನೀಡಿದ ದೆಹೆಲಿ ಹೈಕೋರ್ಟ್

ವರದಿಗಾರ (ಸೆ.1): ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆ ವೇಳೆ ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಪಿಂಜ್ರಾ ಟೋಡ್ ಹೋರಾಟಗಾರ್ತಿ ದೇವಾಂಗನಾ ಕಲಿತಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ.

ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ಜೆಎನ್‌ಯು ವಿದ್ಯಾರ್ಥಿನಿ ದೇವಾಂಗನಾ ಕಲಿತಾ ಅವರಿಗೆ 25 ಸಾವಿರ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿಗೆ ಜಾಮೀನು ನೀಡಿದ್ದಾರೆ. ಸಾಕ್ಷಿಗಳ ಮೇಲೆ ನೇರವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರಬಾರದು ಅಥವಾ ಸಾಕ್ಷ್ಯವನ್ನು ನಾಶ ಮಾಡಬಾರದು ಎಂದು ನ್ಯಾಯಾಲಯ ಕಲಿತಾ ಅವರಿಗೆ ನಿರ್ದೇಶನ ನೀಡಿದೆ.

ಈ ಪ್ರಕರಣದಲ್ಲಿ ಕಲಿತಾ ಮತ್ತು ಸಂಘಟನೆಯ ಇನ್ನೊಬ್ಬ ಸದಸ್ಯೆ ನತಾಶಾ ನರ್ವಾಲ್ ಅವರನ್ನು ದೆಹಲಿ ಪೊಲೀಸರ ಅಪರಾಧ ವಿಭಾಗವು ಬಂಧಿಸಿತ್ತು. ಗಲಭೆ, ಕಾನೂನುಬಾಹಿರ ಸಭೆ ಮತ್ತು ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿಯಲ್ಲಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಈಶಾನ್ಯ ದೆಹಲಿ ಗಲಭೆಗಳು ಮತ್ತು ಹಳೆಯ ದೆಹಲಿಯ ದರಿಯಾಗಂಜ್ ಪ್ರದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಲಿತಾ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ. ಕಲಿತಾ ಅವರು ದರಿಯಾಗಂಜ್ ಮತ್ತು ಈಶಾನ್ಯ ದೆಹಲಿಯ ಒಂದು ಸೇರಿ ಎರಡು ಪ್ರಕರಣಗಳಿಗೆ ಸಂಬಂಧಿಸಿ ಜಾಮೀನು ಪಡೆದಿದ್ದಾರೆ.

ಫೆಬ್ರವರಿ 24 ರಂದು ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದ್ದು, ಸುಮಾರು 200 ಜನರು ಗಾಯಗೊಂಡಿದ್ದರು.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group