ರಾಷ್ಟ್ರೀಯ ಸುದ್ದಿ

ಇನ್ನೂ 2 ವರ್ಷಗಳವರೆಗೆ ಸಾಲ ಮರುಪಾವತಿ ಅವಧಿ ವಿಸ್ತರಣೆ ಮಾಡಬಹುದು: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ, ಆರ್‌ಬಿಐ

ವರದಿಗಾರ (ಸೆ.1): ಸಾಲ ಮರುಪಾವತಿ ಅವಧಿಯನ್ನು (ಮೊರಟೋರಿಯಂ) ಇನ್ನೂ 2 ವರ್ಷಗಳ ಕಾಲ ವಿಸ್ತರಣೆ ಮಾಡಬಹುದು ಎಂದು ಸುಪ್ರೀಂಕೋರ್ಟ್’ಗೆ ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ಮೊರಟೋರಿಯಮ್ ಅನ್ನು ಇನ್ನೂ ಎರಡು ವರ್ಷಗಳಿಗೆ ವಿಸ್ತರಿಸಲಾಗುವುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಮೂಲಕ ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿದೆ.

ಲಾಕ್‌ಡೌನ್‌ನಿಂದ ತೊಂದರೆಗೀಡಾದ ವಲಯಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಮೊರಟೋರಿಯಂ ಅವಧಿಯಲ್ಲಿ ಅಮಾನತುಗೊಂಡ ಇಎಂಐಗಳ ಮೇಲಿನ ಬಡ್ಡಿ ಮನ್ನಾ, ಅಥವಾ ಬಡ್ಡಿ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ನಾಳೆ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಕೊರೊನಾ ಸೋಂಕು ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ ಸಾಲಗಾರರಿಗೆ ಪರಿಹಾರ ಒದಗಿಸಲು ಸರ್ಕಾರ ಜಾರಿಗೆ ತಂದಿರುವ ಮೊರಟೋರಿಯಂ ಯೋಜನೆ ಆಗಸ್ಟ್ 31ಕ್ಕೆ ಕೊನೆಗೊಂಡಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group