ರಾಜ್ಯ ಸುದ್ದಿ

ಎಸ್’ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ‌ಯು ಸಂಪೂರ್ಣ ರಾಜಕೀಯ ಪ್ರೇರಿತ: ಎಸ್’ಡಿಪಿಐ ರಾಜ್ಯಾಧ್ಯಕ್ಷ

ವರದಿಗಾರ (ಸೆ.1): ಕೆಜಿಹಳ್ಳಿ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧ ಎಸ್’ಡಿಪಿಐ ಕಚೇರಿ ಗಳ‌ ಮೇಲೆ ಸಿಸಿಬಿ ಪೊಲೀಸರು ದಾಳಿ‌ ನಡೆಸಿ ಪರಿಶೀಲನೆ ನಡೆಸಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು, ಡಿಜೆ ಹಳ್ಳಿ,ಕೆ.ಜಿ.ಹಳ್ಳಿ, ಹಲಸೂರು ಗೇಟ್‌ನಲ್ಲಿರುವ ಪಕ್ಷದ ಕಚೇರಿಗಳಲ್ಲಿ ಶೋಧ ನಡೆಸಿ ಪರಿಶೀಲನೆ ನಡೆಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಕಚೇರಿಯ ದಾಳಿ ವೇಳೆ ಅಲ್ಲಿನ ಕಾರ್ಯ ಚಟುವಟಿಕೆಗಳು‌ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದಿದ್ದಾರೆ.

‘ಬೆಂಗಳೂರಿನ ಎಸ್’ಡಿಪಿಐ ಕಛೇರಿಯಲ್ಲಿ ಇಂದು ಪೋಲೀಸರು ನಡೆಸಿದ ದಾಳಿಯು ಸಂಪೂರ್ಣ ರಾಜಕೀಯ ಪ್ರೇರಿತವಾದುದು. ಎಸ್’ಡಿಪಿಐಯ ದಮನಕ್ಕೆ ರಾಜ್ಯ ಸರ್ಕಾರ ಎಲ್ಲಾ ಕುತಂತ್ರಗಳನ್ನು ಆಡುತ್ತಿದೆ ಹಾಗೂ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿದೆ. ರಾಜ್ಯದ ಬಿಜೆಪಿ ಸರಕಾರ ಸತ್ಯವನ್ನು ಮುಚ್ಚಿಡುವ ಹತಾಶೆ ಪ್ರಯತ್ನ ಮಾಡುತ್ತಿದೆ’ ಎಂದು ಎಸ್’ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ದಾಳಿ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಸಿಯಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group