ರಾಷ್ಟ್ರೀಯ ಸುದ್ದಿ

ಕೇರಳದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ; ಕಾಂಗ್ರೆಸ್ ಕಚೇರಿ ಮೇಲೆ ಬಾಂಬ್ ದಾಳಿ

ವರದಿಗಾರ (ಸೆ.1): ರಾಜಕೀಯ ಹಿಂಸಾಚಾರ ಕೇರಳದಲ್ಲಿ ಮತ್ತೆ ಮುಂದುವರಿದಿದ್ದು, ರಾಜಧಾನಿ ತಿರುವನಂತಪುರನಲ್ಲಿ ಇಬ್ಬರು ಡಿವೈಎಫ್‌ಐ ಕಾರ್ಯಕರ್ತರ  ಹತ್ಯೆಯ ಬೆನ್ನಲ್ಲೇ ನಾದಾಪುರಂ ಬಳಿಯ ಕಲ್ಲಾಚಿಯಲ್ಲಿರುವ ಕಾಂಗ್ರೆಸ್ ಪಕ್ಷದ ಮಂಡಲಂ ಸಮಿತಿ ಕಚೇರಿ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.

ಸ್ಥಳೀಯ ಸಿಪಿಐಎಂ ಬೆಂಬಲಿಗರು ತಮ್ಮ ಕಚೇರಿಗೆ ಬಾಂಬ್ ಎಸೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ದಾಳಿ ನಡೆಸಿದ ಸಿಪಿಐ (ಎಂ) ಕಾರ್ಯಕರ್ತರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಕಲ್ಲಾಚಿಯಲ್ಲಿ ಧರಣಿ ನಡೆಸಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ವೀಡಿಯೋ ವೀಕ್ಷಿಸಿ: 

ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ದಾಳಿಯಿಂದ ಕಚೇರಿಯ ಗಾಜುಗಳು ಪುಡಿಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭಾನುವಾರ ಮಧ್ಯರಾತ್ರಿ ತಿರುವನಂತಪುರಂನ ವೆಂಜರಮೂಡಿನಲ್ಲಿ ಇಬ್ಬರು ಡಿವೈಎಫ್‌ಐ ಕಾರ್ಯಕರ್ತರಾದ ಮಿಥಿಲ್ ರಾಜ್ ಮತ್ತು ಹಕ್ ಮುಹಮ್ಮದ್ ಎಂಬವರ ಹತ್ಯೆ ನಡೆದಿತ್ತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group