ರಾಜ್ಯ ಸುದ್ದಿ

ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ಮೋದಿ ಹೊರಟಿದ್ದಾರೆ; ಸಿದ್ದರಾಮಯ್ಯ ಟೀಕಾಪ್ರಹಾರ

 

‘ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿರುವುದು ಕೊರೊನಾ ಮಾರಿಯನ್ನು ಸರ್ಕಾರ ಎಷ್ಟುಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿ’

ವರದಿಗಾರ (ಸೆ.1): ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಆದರೆ  ಈ ಕುಸಿತದ ಪೂರ್ಣ ಹೊಣೆಯನ್ನು ಕೊರೊನಾ ರೋಗದ ಮೇಲೆ ಹೇರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಜವಾಬ್ದಾರಿಯನ್ನು ನುಣುಚಿಕೊಳ್ಳುವುದು ಇನ್ನೂ ಹೆಚ್ಚಿನ ಆಘಾತಕಾರಿ ಬೆಳ ವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ ಎನ್ನುವುದನ್ನು ಸರ್ಕಾರದ ಅಧಿಕೃತ ದಾಖಲೆಗಳೇ ಹೇಳುತ್ತಿವೆ. ಆರ್‌ಬಿಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರವರೆಗೆ ದೇಶದ ಪ್ರಖ್ಯಾತ ಆರ್ಥಿಕ ತಜ್ಞರೆಲ್ಲರೂ ದೇಶದ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದಾರೆ. ಆಗ ಕುರುಡು-ಕಿವುಡು ಆಗಿದ್ದ ಸರ್ಕಾರ ಈಗ ಕೊರೊನಾಕ್ಕಾಗಿ ರೋದಿಸುತ್ತಿದೆ. 2015ರಲ್ಲಿ ಜಿಡಿಪಿ ಅಂದಾಜು ಮಾಡುವ ಮೂಲ ವರ್ಷವನ್ನು 2004-05ರಿಂದ 2011-12ಕ್ಕೆ ಬದಲಾಯಿಸಲಾಯಿತು. ಅದರ ನಂತರ ಬಣ್ಣ ಬಯಲಾಗಬಾರದೆಂದು ಅಧಿಕೃತ ಅಂಕಿ ಅಂಶಗಳನ್ನೇ ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ಪ್ರಧಾನಿ ನರೇಂದ್ರಮೋದಿಯವರು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕೊರೊನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿರುವುದು ಕೊರೊನಾ ಮಾರಿಯನ್ನು ಸರ್ಕಾರ ಎಷ್ಟುಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿ. ಲಾಕ್ ಡೌನ್ ಅಗತ್ಯವಿತ್ತು ನಿಜ, ನಮ್ಮ ಪಕ್ಷ ಕೂಡಾ ಅದನ್ನು ಬೆಂಬಲಿಸಿತ್ತು. ಆದರೆ ಅವೈಜ್ಞಾನಿಕವಾಗಿ, ದಿನಕ್ಕೊಂದು ರೀತಿಯ ಅನಿಶ್ಚಿತ ನಿರ್ಧಾರಗಳ ಮೂಲಕ ಲಾಕ್ ಡೌ ನ್ ಜಾರಿಗೊಳಿಸಿದ್ದ  ಪರಿಣಾಮವಾಗಿ ಅದರಿಂದ ಲಾಭವಾಗಲಿಲ್ಲ, ನಷ್ಟವಾಗಿದ್ದೇ ಹೆಚ್ಚು. ಇದರ ಪೂರ್ಣ ಹೊಣೆಯನ್ನು ಪ್ರಧಾನ ಮಂತ್ರಿಯವರೇ ವಹಿಸಿಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದೇಶ ಎದುರಿಸುತ್ತಿರುವ ಈಗಿನ ಆರ್ಥಿಕ ದುಸ್ಥಿತಿಗೆ ನೋಟು ಅಮಾನ್ಯೀಕರಣ, ದೋಷಪೂರಿತ ಜಿಎಸ್ಟಿಯ ಅವೈಜ್ಞಾನಿಕ ಜಾರಿ ಮತ್ತು ಕೆಲಸವೇ ಗೊತ್ತಿಲ್ಲದ ಅಡ್ಡಕಸುಬಿ ಸಚಿವರು ಕೂಡಾ ಕಾರಣ. ದೇಶದ ಮುಂದೆ ಮೊದಲು ತಪ್ಪೊಪ್ಪಿಕೊಳ್ಳಬೇಕು. ರೋಗದ ಕಾರಣ ತಿಳಿಯದೆ ಔಷಧಿ ಕೊಟ್ಟರೆ ರೋಗ ಗುಣವಾಗಲಾರದು ಎಂದು ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group