ರಾಷ್ಟ್ರೀಯ ಸುದ್ದಿ

ನೀಟ್‌ ಪರೀಕ್ಷೆ ಬರೆಯಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ ಪುಲ್ವಾಮ ದಾಳಿ ಆರೋಪಿ

ವರದಿಗಾರ (ಸೆ.1): ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಗೆ ಹಾಜರಾಗಲು ಪುಲ್ವಾಮಾ ದಾಳಿ ಪ್ರಕರಣದ ಆರೋಪಿ ವೈಝುಲ್ ಇಸ್ಲಾಂ ಜಾಮೀನು ಕೋರಿ ಜಮ್ಮುವಿನ ವಿಶೇಷ ಎನ್‌ಐಎ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 3ರಂದು ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ವಿಚಾರಣೆಗೆ ಜಾಮೀನು ಅರ್ಜಿಯನ್ನು ಪಟ್ಟಿ ಮಾಡಲಾಗಿದೆ.

“ಆರೋಪಿ ವೈಝುಲ್ ಇಸ್ಲಾಂ (ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣ) ನೀಟ್ ಪರೀಕ್ಷೆಗಳಿಗೆ ಹಾಜರಾಗಲು ಬಯಸಿದ್ದರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 3 ರಂದು ಈ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಈ ಅರ್ಜಿಯನ್ನು ನಾವು ವಿರೋಧಿಸುತ್ತಿದ್ದೇವೆ” ಎಂದು ಎನ್ಐಎ ಸಲಹೆಗಾರ ವಿಪಿನ್ ಕಲ್ರಾ ಇಂದು ಸುದ್ದಿಗಾರರಿಗೆ ತಿಳಿಸಿದರು.

ಪುಲ್ವಾಮಾ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಜಮ್ಮುವಿನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಅಲ್ವಿ ಮತ್ತು ಇತರ 18 ಮಂದಿಯ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಳೆದ ವಾರ ಚಾರ್ಜ್‌ಶೀಟ್ ಸಲ್ಲಿಸಿತ್ತು, ಮುಖ್ಯ ಪ್ರಕರಣದ ವಿಚಾರಣೆ ಸೆಪ್ಟೆಂಬರ್ 15 ರಂದು ಆರಂಭಗೊಳ್ಳಲಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group