ರಾಜ್ಯ ಸುದ್ದಿ

ಕೊರೊನಾ ಗೋಲ್‌ಮಾಲ್; ವಿರೋಧ ಪಕ್ಷವಾಗಿ‌ ಕಾಂಗ್ರೆಸ್ ವಿಫಲತೆ: ಕುಮಾರಸ್ವಾಮಿ

‘ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ‌ ಕೆಲಸ‌‌ ಮಾಡಿದ್ದು‌ ನಾನು. ಆದರೆ ಹೆಸರು‌ ಮಾಡಿದ್ದು ಮಾತ್ರ ಕಾಂಗ್ರೆಸ್’

ವರದಿಗಾರ (ಸೆ.2): ಕರ್ನಾಟಕ ರಾಜ್ಯದಲ್ಲಿ ವಿರೋಧ‌ ಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್ ರಾಜ್ಯ ಸರಕಾರದ ಕೊರೊನಾ ಗೋಲ್‌ಮಾಲ್ ಕುರಿತ ಆರೋಪ ಸಾಬೀತುಪಡಿಸಲು ‌ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಬಗ್ಗೆ ಅವರು ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಯಾವುದೇ ಆರೋಪ‌ ಮಾಡಿದರೆ ಅದಕ್ಕೆ ಸೂಕ್ತ ದಾಖಲೆ ಇರಬೇಕು. ಆದರೆ ಈ ವಿಚಾರದಲ್ಲಿ ಸರಿಯಾದ ದಾಖಲೆ ತೋರಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ‌ ಕೆಲಸ‌‌ ಮಾಡಿದ್ದು‌ ನಾನು. ಆದರೆ ಹೆಸರು‌ ಮಾಡಿದ್ದು ಮಾತ್ರ ಕಾಂಗ್ರೆಸ್’ ಎಂದು ಹೇಳಿಕೊಂಡಿದ್ದಾರೆ.

‘ನನ್ನ ಸರ್ಕಾರ ಪತನ ಆಗಲು ಅಕ್ರಮ ಮಾಫಿಯಾ ಹಣವೇ ಕಾರಣ’ ಎಂದು ಪುನರುಚ್ಛರಿಸಿದ ಅವರು ‘ನನಗೆ ನಶೆ ಬರಿಸಲು ಯಾರಿಂದಲೂ ಸಾಧ್ಯ ಇಲ್ಲ. ಕೆಲವರಿಗೆ ಅಧಿಕಾರ ಬಂದಾಗ ನಶೆ ಬರುತ್ತೆ. ಆದರೆ ಅಧಿಕಾರ ಯಾರಿಗೂ ಎಂದೂ ಶಾಶ್ವತ ಅಲ್ಲ’ ಎಂದು ಸಚಿವ ಸಿ.ಟಿ. ರವಿ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರು ಗಲಭೆ ಆಗಿ ವರ್ಷ ಆಯಿತು. ಮೊನ್ನೆ ಡಿ.ಜೆ. ಹಳ್ಳಿ ಗಲಭೆ ಆಯ್ತು. ಈಗ ಡ್ರಗ್ಸ್ ದಂಧೆ ಬೆಳಕಿಗೆ ಬಂತು. ಇದೆಲ್ಲದರ ತನಿಖೆ ಮಾತ್ರ ನಡೆಯುತ್ತಲೇ ಇದೆ. ಈ ಘಟನೆಗಳ ಕಿಂಗ್ ಪಿನ್‌ಗಳನ್ನು ಬಂಧಿಸಲು ಸರ್ಕಾರಕ್ಕೆ ದಿಟ್ಟತನವಿಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ದೇಶದಲ್ಲಿ ಆರ್ಥಿಕತೆ ಸಂಪೂರ್ಣವಾಗಿ ಕುಸಿದಿದೆ. ಇದನ್ನು  ಸರಿಪಡಿಸುವಲ್ಲಿ‌ ಮೋದಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group