ರಾಷ್ಟ್ರೀಯ ಸುದ್ದಿ

ಪಬ್ಜಿ ಸೇರಿದಂತೆ 118 ಚೀನಾ ಆಪ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ವರದಿಗಾರ (ಸೆ.2): ಮೊಬೈಲ್ ಗೇಮ್ ಪ್ಲೇಯರ್ ಪಬ್ಜಿ ಆ್ಯಪ್ ಸೇರಿದಂತೆ 118ಕ್ಕೂ ಅಧಿಕ ಮೊಬೈಲ್ ಆಪ್‌ಗಳನ್ನು ಕೇಂದ್ರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಬುಧವಾರ ನಿಷೇಧಿಸಿದೆ.

ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ನಾಲ್ಕು ತಿಂಗಳಿನಿಂದ ಲಡಾಖ್‌ನಲ್ಲಿ ಭಾರತದೊಂದಿಗೆ ಸಂಘರ್ಷಕ್ಕೆ ಇಳಿದಿದೆ.

ಇದು ಮೂರನೇ ಸುತ್ತಿನ ನಿಷೇಧವಾಗಿದೆ. ಗಡಿಯಲ್ಲಿ ಉದ್ವಿಗ್ನತೆಯ ಮಧ್ಯೆ ಜೂನ್ 29 ರಂದು ಭಾರತ 59 ಚೀನೀ ಆ್ಯಪ್‌ಗಳನ್ನು ನಿಷೇಧಿಸಿತ್ತು. ಟಿಕ್‌ಟಾಕ್, ಯುಸಿ ಬ್ರೌಸರ್, ಕ್ಸೆಂಡರ್, ಶೇರಿಟ್, ವೀಚಾಟ್ ಮತ್ತು ವೀಬೊ ಜೂನ್‌ನಲ್ಲಿ ನಿಷೇಧಿಸಲ್ಪಟ್ಟ ಪ್ರಮುಖ ಆಪ್‌ಗಳಾಗಿವೆ.
ಜುಲೈ 23 ರಂದು ಎರಡನೇ ಸುತ್ತಿನಲ್ಲಿ ಟಿಕ್‌ಟಾಕ್ ಲೈಟ್, ಹೆಲೊ ಲೈಟ್, ಶೇರ್‌ಇಟ್ ಲೈಟ್, ಬಿಗೊ ಲೈವ್ ಲೈಟ್, ವಿಎಫ್‌ವೈ ಲೈಟ್ ಸೇರಿದಂತೆ ಚೀನಾದ 47 ಆ್ಯಪ್‌ಗಳನ್ನು ನಿಷೇಧಿಸಿತ್ತು. ಇದೀಗ ಮೂರನೇ ಬಾರಿಗೆ ಕ್ರಮ ಕೈಗೊಂಡಿದೆ. ದೇಶದ ರಕ್ಷಣೆ, ಸಾರ್ವಭೌಮತ್ವ, ಸಮಗ್ರತೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು 118 ಆಪ್‌ಗಳನ್ನು ನಿಷೇಧಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.ಎರಡು ಬಾರಿ ಚೀನಾ ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ದೇಶದಲ್ಲಿ ಪಬ್ಜಿಯೂ ನಿಷೇಧವಾಗಲಿದೆ ಎಂಬ ಊಹಾಪೋಹ ಹರಡಿತ್ತು.

ದಕ್ಷಿಣ ಏಷ್ಯಾ ಭಾಗದಲ್ಲಿ ಭಾರಿ ಜನಪ್ರಿಯ ಗೇಮ್ ಆಗಿರುವ ಪಬ್ಜಿಯ ಜನಪ್ರಿಯತೆ ಭಾರತ ಮತ್ತು ಪಾಕಿಸ್ತಾನದಲ್ಲಿ ಹೆಚ್ಚಾಗಿದೆ. ಭಾರತವೊಂದರಲ್ಲಿ ಈ ಅಪ್ಲಿಕೇಷನ್‌ ಅನ್ನು 1.75 ಕೋಟಿ ಮಂದಿ ಮೊಬೈಲ್‌ಗಳಲ್ಲಿ ಡೌನ್ ಲೋಡ್‌ ಮಾಡಿಕೊಂಡಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group