ರಾಜ್ಯ ಸುದ್ದಿ

ರಾಜ್ಯ ಸರಕಾರ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಮತ್ತಷ್ಟು ಹಿಂಸೆ, ಗಲಭೆಗೆ ಪ್ರೋತ್ಸಾಹ ನೀಡಿದೆ: ಸಲೀಂ ಅಹ್ಮದ್

ವರದಿಗಾರ (ಸೆ.2): ರಾಜ್ಯ ಸರಕಾರ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಮತ್ತಷ್ಟು ಹಿಂಸೆ, ಗಲಭೆಗೆ ಪ್ರೋತ್ಸಾಹ ನೀಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆರೋಪಿಸಿದ್ದಾರೆ.

ಅವರು ರಾಜ್ಯ ಸರಕಾರವು 62 ಕ್ರಿಮಿನಲ್ ಪ್ರಕರಣಗಳನ್ನು ವಾಪಾಸ್ ಪಡೆದ ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಲೀಂ ಅಹ್ಮದ್, ‘ಬಿಜೆಪಿ ಸರ್ಕಾರವು ಜನಪರ ಚಳವಳಿಗಳನ್ನು ಮಾಡುವವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವ ನೆಪದಲ್ಲಿ ತನ್ನ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಮೂಲಕ ಮತ್ತಷ್ಟು ಹಿಂಸೆ ಹಾಗೂ ಗಲಭೆ ಮಾಡಲು ಪ್ರೋತ್ಸಾಹ ನೀಡಿದೆ’ ಎಂದು ಹೇಳಿದ್ದಾರೆ.

‘ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಕಾನೂನು, ಅಭಿಯೋಜನೆ, ಪೊಲೀಸ್ ಇಲಾಖೆ ಹಿಂದಕ್ಕೆ ಪಡೆಯುವುದು ಸೂಕ್ತವಲ್ಲ ಎಂದು ಹೇಳಿದ್ದರೂ ಸರ್ಕಾರ ಅಂತಹ ಪ್ರಕರಣಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group