ವರದಿಗಾರ (ಸೆ.2): ಉತ್ತರ ಪ್ರದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದರೂ, ದಲಿತರ ಮೇಲಿನ ದೌರ್ಜನ್ಯವನ್ನು ನಿಯಂತ್ರಿಸುವಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀವ್ರವಾಗಿ ಹದಗೆಡುತ್ತಿದ್ದರೂ, ಆಡಳಿತಾರೂಢ ಬಿಜೆಪಿ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶದ ಮಹೋಬ, ಆಗ್ರಾ, ಗೋರಖ್ಪುರ, ರಾಯ್ಬರೇಲಿ, ಹೊರಡಿಯಲ್ಲಿ ದಲಿತರ ಹತ್ಯೆ ಪ್ರಕರಣಗಳು ನಡೆದಿವೆ. ಹಲವು ಕಡೆ ದಲಿತರ ಮೇಲೆ ದೌರ್ಜನ್ಯಗಳು ನಡೆದಿವೆ. ಎಲ್ಲೆಲ್ಲಿ ಇಂಥ ಪ್ರಕರಣಗಳು ನಡೆದಿವೆ ಎಂದು ಪಟ್ಟಿ ಮಾಡಿ, ವರದಿ ತಯಾರಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದು, ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸುವ ಕುರಿತು ಬಿಜೆಪಿ ಏಕೆ ಮಾತನಾಡುತ್ತಿಲ್ಲ‘ ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ಇಂಥ ಘಟನೆಗಳ ಬಗ್ಗೆ ನಿರ್ಲಕ್ಷ್ಯವಹಿಸುವುದನ್ನು ಬಿಟ್ಟು ಸೂಕ್ತ ಕ್ರಮ ಕೈಗೊಳ್ಳಬೇಕು‘ ಎಂದು ಪ್ರಿಯಾಂಕಾ ಸರಕಾರವನ್ನು ಆಗ್ರಹಿಸಿದ್ದಾರೆ.
