ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ: 3 ವರ್ಷದ ಮಗುವಿನ ಅತ್ಯಾಚಾರಗೈದು ಕೊಲೆ! 20 ದಿನಗಳಲ್ಲಿ ಮೂರನೇ ಘಟನೆ!!

ಮಾಧ್ಯಮಗಳ ‘ಉತ್ತಮ ಮುಖ್ಯಮಂತ್ರಿ’ಯ ರಾಜ್ಯದಲ್ಲಿ ತೀವ್ರವಾಗಿ ಹದೆಗೆಟ್ಟ ಕಾನೂನು ಸುವ್ಯವಸ್ಥೆ

ವರದಿಗಾರ (ಸೆ.4): ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರಗೈದು ಕತ್ತುಹಿಸುಕಿ ಕೊಲೆ ಗೈದಿರುವ ಪೈಶಾಚಿಕ ಕೃತ್ಯ ನಡೆದಿದ್ದು, ಗುರುವಾರ ಮಗುವಿನ ಕಳೇಬರ ಪತ್ತೆಯಾಗಿದೆ.

ಕಳೆದ ಮೂರು ವಾರಗಳ ಅವಧಿಯಲ್ಲಿ ನಡೆಯುತ್ತಿರುವ ಮೂರನೇ ಕೃತ್ಯ ಇದಾಗಿದೆ. ಆರೋಪಿ ಲೇಖ್‌ ರಾಮ್ ಎಂಬಾತನನ್ನು ಎನ್‌ಕೌಂಟರ್‌ ನಡೆಸಿ ಪೊಲೀಸರು ಬಂಧಿಸಿದ್ದಾರೆ.

ಬುಧವಾರದಿಂದ ಮಗು ಕಾಣೆಯಾಗಿತ್ತು. ಬಳಿಕ ಹುಡುಕಾಡಿದಾಗ ಮೃತದೇಹ ಗಾಯಗೊಂಡ ಸ್ಥಿತಿಯಲ್ಲಿ ಗ್ರಾಮದಲ್ಲಿ ಪತ್ತೆಯಾಗಿದೆ. ತನ್ನ ಮೇಲಿನ ಹಳೆ ದ್ವೇಷದಿಂದ ಮತ್ತೊಂದು ಗ್ರಾಮದ ಲೇಖ್‌ರಾಮ್ ಎಂಬಾತ ನನ್ನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಂದಿದ್ದಾನೆ ಎಂದು ಮಗುವಿನ ತಂದೆ ಆರೋಪಿಸಿದ್ದಾರೆ.

ಅತ್ಯಾಚಾರವೆಸಗಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕಬ್ಬಿನ ಗದ್ದೆಯಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅಗತ್ಯವಿದ್ದರೆ ಆರೋಪಿಯ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು. ಈಗಾಗಲೇ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದರು.

ಹದಿಹರೆಯದ ಹುಡುಗಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಆಕೆಯ ಕಣ್ಣುಗಳನ್ನು ಕಿತ್ತು ಭೀಕರವಾಗಿ ಕೊಲೆಗೈದ ಘಟನೆ ನಡೆದ ಬಳಿಕ ಲಖಿಂಪುರ ಖೇರಿ ಸುದ್ದಿಯಲ್ಲಿದೆ. ಹುಡುಗಿ ವಿದ್ಯಾರ್ಥಿವೇತನದ ಅರ್ಜಿಯನ್ನು ಭರ್ತಿ ಪಟ್ಟಣಕ್ಕೆ ಹೋಗಿದ್ದಾಗ ಆಕೆಯನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು.

ಕೆಲವು ದಿನಗಳ ಹಿಂದೆ, ಇದೇ ರೀತಿಯ ಮತ್ತೊಂದು ಪ್ರಕರಣ ನಡೆದಿದ್ದು, ಜಿಲ್ಲೆಯ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ನಂತರ ಆಕೆಯನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು. ಅಪ್ರಾಪ್ತ ಬಾಲಕಿಯ ಶವವು ಆಕೆಯ ಹಳ್ಳಿಯಿಂದ 200 ಮೀಟರ್ ದೂರದಲ್ಲಿರುವ ಒಣಗಿದ ಕೊಳದ ಬಳಿ ಪತ್ತೆಯಾಗಿತ್ತು.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಅತ್ಯಾಚಾರ-ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರವನ್ನು ಪ್ರತಿಪಕ್ಷಗಳು ತೀವ್ರ ಟೀಕೆಗೆ ಗುರಿಪಡಿಸಿದವೆ. ಮಾತ್ರವಲ್ಲ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿವೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group