ರಾಷ್ಟ್ರೀಯ ಸುದ್ದಿ

ನೀಟ್, ಜೆಇಇ ಪರೀಕ್ಷೆ ಮುಂದೂಡಲು ಕೋರಿ 6 ರಾಜ್ಯಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ವರದಿಗಾರ (ಸೆ.4): ಕೋವಿಡ್‌-19 ಸೋಂಕಿನ ಸಮಸ್ಯೆ ಇರುವುದರಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ನೀಟ್‌ ಮತ್ತು ಜಂಟಿ ಪ್ರವೇಶ ಪರೀಕ್ಷೆ -ಜೆಇಇ  ಪರೀಕ್ಷೆಗಳನ್ನು  ಮುಂದೂಡಬೇಕೆಂದು ಆರು ರಾಜ್ಯಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾ. ಬಿ.ಆರ್. ಗಾವೈ ಮತ್ತು ನ್ಯಾ.ಕೃಷ್ಣ ಮುರಾರಿ ನೇತೃತ್ವದ ತ್ರಿಸದಸ್ಯ ಪೀಠ ಮರುಪರಿಶೀಲನಾ ಅರ್ಜಿಯನ್ನು ವಜಾ ಮಾಡಿದೆ.

ಕಳೆದ ಆಗಸ್ಟ್ 17ರಂದು ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂಬ  ಸುಪ್ರೀಂಕೋರ್ಟ್  ನೀಡಿದ್ದ ತೀರ್ಪಿನ ಮರುಪರಿಶೀಲನೆಗಾಗಿ ಮನವಿ ಮಾಡಲಾಗಿತ್ತು.

ಬಿಜೆಪಿ ಸರ್ಕಾರೇತರ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ರಾಜ್ಯಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದವು.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group