ರಾಜ್ಯ ಸುದ್ದಿ

ನನ್ನಂತಹವನಿಗೆ‌ ಒಲಿದು ಬಂದ ಗುರುಗಳು ಜಗದ‌ ಮಕ್ಕಳೆಲ್ಲರಿಗೂ ಸಿಗಲಿ: ಶಿಕ್ಷಕರ ದಿನಾಚರಣೆಯಂದು ಗುರುಗಳನ್ನು ಸ್ಮರಿಸಿದ ಸಿದ್ದರಾಮಯ್ಯ

ವರದಿಗಾರ (ಸೆ.5): ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ತಮ್ಮ ಗುರುಗಳನ್ನು ಸ್ಮರಿಸಿಕೊಂಡಿದ್ದಾರೆ.

ಹಳ್ಳಿಯಲ್ಲಿ ಹುಟ್ಟಿದ ನನ್ನಂತಹವನಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಕೂತು ಜನಸೇವೆ ಮಾಡುವ ಅವಕಾಶ ಕೂಡಿ ಬಂದಿದ್ದರೆ ಅದಕ್ಕೆ ನನ್ನನ್ನು ತಿದ್ದಿ ತೀಡಿ ಬೆಳೆಸಿದ ಗುರುಗಳು ಕಾರಣ. ಅವರಿಗೆ ತಲೆಬಾಗಿ ನಮಿಸುವೆ.  ನನ್ನಂತಹವನಿಗೆ‌ ಒಲಿದು ಬಂದ ಗುರುಗಳು ಜಗದ‌ ಮಕ್ಕಳೆಲ್ಲರಿಗೂ ಸಿಗಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಕರಿಗೆ ಶುಭ ಕೋರಿದ್ದಾರೆ.

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಟ್ವೀಟ್ ಮಾಡಿರುವ ಅವರು ಎಲ್ಲಾ ಶಿಕ್ಷಕರಿಗೂ ಶುಭ ಕೋರಿದ್ದಾರೆ. ಈ ಹಿಂದೆಯೂ ಹಲವು ಸಭೆ ಸಮಾರಂಭಗಳಲ್ಲಿಯೂ ಸಿದ್ದರಾಮಯ್ಯ ಅವರು ತಮ್ಮ ಪ್ರಾಥಮಿಕ ಶಾಲಾ ಹಂತದ ಶಿಕ್ಷಕರನ್ನು ಸ್ಮರಿಸಿದ್ದರು. ಮಾತ್ರವಲ್ಲ ತಾವು ಮುಖ್ಯಮಂತ್ರಿಯಾಗಲು ಅವರ ಕೊಡುಗೆ ಕಾರಣ.  ಅವರ ಪ್ರಯತ್ನ ಇಲ್ಲದಿದ್ದರೆ ತಾವು ಇಂದು ಕೂಡ ಹಳ್ಳಿಯಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ಹೇಳಿಕೊಂಡಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group