ರಾಜ್ಯ ಸುದ್ದಿ

ಬಿಜೆಪಿ ನಾಯಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಹಿಂಪಡೆದ ಬಿಜೆಪಿ ಸರ್ಕಾರ: 2009ರಿಂದ ಮಾಹಿತಿ ನೀಡುವಂತೆ ಸಿದ್ದರಾಮಯ್ಯ ಪತ್ರ

ವರದಿಗಾರ (ಸೆ.5): ಹೋರಾಟಗಾರರ ಮೇಲಿನ ಕ್ರಿಮಿನಲ್ ಪ್ರಕರಣ ಹಿಂಪಡೆಯುವ ನೆಪದಲ್ಲಿ ಬಿಜೆಪಿ ಸರ್ಕಾರ ತಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮೇಲಿರುವ ಪ್ರಕರಣ ಹಿಂಪಡೆದಿರುವುದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚೆತ್ತುಕೊಂಡಿದ್ದು,  ಕ್ರಿಮಿನಲ್ ಮೊಕದ್ದಮೆ ಹಿಂಪಡೆದಿರುವ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ  ಸಂಬಂಧ ಗೃಹಸಚಿವ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಎರಡು ಪ್ರತ್ಯೇಕ ಪತ್ರ ಬರೆದಿರುವ ಸಿದ್ದರಾಮಯ್ಯ, 2009ರಿಂದ ಇಲ್ಲಿಯವರೆಗೆ ವಿಚಾರಣೆ ಹಾಗೂ ತನಿಖೆಯಿಂದ ಹಿಂಪಡೆದಿರುವ ರಾಜಕೀಯ ವ್ಯಕ್ತಿಗಳು ಹಾಗೂ ಸಂಘಟನೆಗಳ ಮೇಲಿನ ಪ್ರಕರಣಗಳ ಮಾಹಿತಿ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಂಘಟನೆಗಳ ಹೆಸರು, ಆರೋಪಿತರ ಹೆಸರು, ಘಟನೆಯ ವಿವರ, ಸೆಕ್ಷನ್, ಪ್ರಕರಣ ಹಿಂಪಡೆದ ದಿನಾಂಕ, ಹಿಂಪಡೆಯಲು ಕಾರಣಗಳನ್ನು ನೀಡುವುದರ ಜೊತೆಗೆ ಈ ಸಂಬಂಧ ಕಾನೂನು ಇಲಾಖೆ ಮತ್ತು ಅಡ್ವೋಕೇಟ್ ಜನರಲ್ ಅಭಿಪ್ರಾಯ ವಿವರ ನೀಡುವಂತೆ ಪತ್ರದಲ್ಲಿ ಸಿದ್ದರಾಮಯ್ಯ ಕೇಳಿದ್ದಾರೆ.

ಬಿಜೆಪಿ ನಾಯಕರ ಮೇಲಿದ್ದ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬಾರದು ಎಂದು ಕಾನೂನು ಇಲಾಖೆ, ಪೊಲೀಸ್ ಇಲಾಖೆ ಸಲಹೆ ನೀಡಿದ್ದರೂ ಅವುಗಳನ್ನು ಉಲ್ಲಂಘಿಸಿ ರಾಜ್ಯ ಸರ್ಕಾರ ಪ್ರಕರಣ ಹಿಂದಕ್ಕೆ ಪಡೆದಿತ್ತು.

ಅದೇ ರೀತಿ ಎನ್‌ಡಿಪಿಎಫ್‌  ಕಾಯ್ದೆಯಡಿ ಕಳೆದ 10 ವರ್ಷಗಳಿಂದ  ತೆಗೆದುಕೊಂಡ ಕಾನೂನು ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಗೃಹ ಸಚಿವ ಬೊಮ್ಮಾಯಿ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group