ರಾಷ್ಟ್ರೀಯ ಸುದ್ದಿ

ದಾವೂದ್ ಇಬ್ರಾಹೀಂ ಹೆಸರಿನಲ್ಲಿ ಉದ್ದವ್ ಠಾಕ್ರೆ ನಿವಾಸಕ್ಕೆ ಅಪರಿಚಿತ ಕರೆ; ಮಾತ್ರೋಶ್ರೀಗೆ ಭದ್ರತೆ ಹೆಚ್ಚಳ

ವರದಿಗಾರ (ಸೆ.7): ಭೂಗತ ಜಗತ್ತಿನ ದಾವೂದ್ ಇಬ್ರಾಹೀಂ ಪರವಾಗಿ ದುಬೈಯಿಂದ ಕರೆ ಮಾಡುತ್ತಿದ್ದೇನೆ ಎಂದು ವ್ಯಕ್ತಿಯೊಬ್ಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಬಾಂದ್ರಾ ದಲ್ಲಿರುವ ಖಾಸಗಿ ನಿವಾಸ “ಮಾಥೋಶ್ರೀ”ಗೆ ಕರೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ನಿವಾಸದ ಭದ್ರತೆ ಹೆಚ್ಚಿಸಲಾಗಿದೆ.

ಮಾತೋಶ್ರೀ ನಿವಾಸದಲ್ಲಿನ ಲ್ಯಾಂಡ್‌ಲೈನ್‌‌ಗೆ ಎರಡು ಕರೆಗಳು ಬಂದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಅವರ ನಿವಾಸದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕರೆ ಮಾಡಿದವರು ದಾವೂದ್ ಪರವಾಗಿ ಕರೆ ಮಾಡುತ್ತಿರುವುದಾಗಿ ಹೇಳಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಶನಿವಾರ ರಾತ್ರಿ 10.30ರ ಸುಮಾರಿಗೆ ಎರಡು ಬಾರಿ ರಿಂಗಣಿಸಿತು. ಕರೆ ಮಾಡಿದವರು ಮುಖ್ಯಮಂತ್ರಿಯೊಂದಿಗೆ ಮಾತನಾಡಬೇಕಿದೆ ಎಂದರು. ನಾವು ಕರೆ ಮಾಡಿದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ
ಕರೆಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಳಿಕ ಬಂಗಲೆಯ ಹೊರಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group