ರಾಷ್ಟ್ರೀಯ ಸುದ್ದಿ

ಬಿಜೆಪಿಯ ಐಟಿ ಸೆಲ್  ರಾಕ್ಷಸನಂತೆ: ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸ್ವ ಪಕ್ಷದವರ ವಿರುದ್ಧವೇ ಆಕ್ರೋಶ

Subramanian Swamy

ವರದಿಗಾರ (ಸೆ.7): ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯಸ್ವಾಮಿ, ಬಿಜೆಪಿಯ ಐಟಿ ಸೆಲ್ ವಿರುದ್ಧ ಹರಿಹಾಯ್ದಿದ್ದು, ಬಿಜೆಪಿ ಐಟಿ ಸೆಲ್ ರಾಕ್ಷಸನಂತೆ ವರ್ತಿಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬಿಜೆಪಿ ಐಟಿ ಸೆಲ್ ರಾಕ್ಷಸನಂತೆ ವರ್ತಿಸುತ್ತಿದೆ. ಅದರ ಕೆಲವು ಸದಸ್ಯರು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ನಕಲಿ ಖಾತೆಗಳ ಮೂಲಕ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ. ಇದರಿಂದ ನನ್ನ ಅಭಿಮಾನಿಗಳು ಸಿಟ್ಟಿಗೆದ್ದು ವೈಯಕ್ತಿಕ ದಾಳಿ ಮಾಡಿದರೆ, ಅದಕ್ಕೆ ನಾನು ಹೊಣೆಯಲ್ಲ. ಅದರಂತೆಯೇ, ರಾಕ್ಷಸನಂತಿರುವ ಪಕ್ಷದ ಐಟಿ ಸೆಲ್‌ನ ಕೃತ್ಯಗಳಿಗೆ ಬಿಜೆಪಿಯನ್ನೇ ಹೊಣೆಯಾಗಿಸಲು ಸಾಧ್ಯವಿಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಮಾಳವಿಯಾ ಎಂಬ ಒಂದು ಪಾತ್ರವು ಅಶುದ್ಧಿಯಿಂದ ಕೂಡಿದ ಗಲಭೆಯನ್ನು ಸೃಷ್ಟಿಸುತ್ತಿದೆ. ನಾವು ರಾವಣನ ಅಥವಾ ದುಶ್ಯಾಸನನ ಪಕ್ಷದವರಲ್ಲ. ಮರ್ಯಾದಾ ಪುರುಷೋತ್ತಮನ ಪಕ್ಷದವರು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group