ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ: ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆ!

Kushinagar Mob Lynching

ವರದಿಗಾರ (ಸೆ.7): ಉತ್ತರಪ್ರದೇಶದ ಕುಶಿನಗರದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಕೊಲೆ ಆರೋಪಿಯೊಬ್ಬನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಹತ್ಯೆಯಾದ ವ್ಯಕ್ತಿಯ ವಿರುದ್ಧ ಶಾಲಾ ಶಿಕ್ಷಕರನ್ನು ಕೊಂದ ಆರೋಪವಿದೆ ಎನ್ನಲಾಗಿದೆ.

ಹಲವು ಪೊಲೀಸ್ ಅಧಿಕಾರಿಗಳು ದಾಳಿಯನ್ನು ತಡೆಯಲು ಪ್ರಯತ್ನಿಸಿದ್ದರೂ ಅವರಿಗೆ ಸಾಧ್ಯವಾಗಲಿಲ್ಲ. ಹಲ್ಲೆಯಿಂದ ವ್ಯಕ್ತಿ ಸಾವನ್ನಪ್ಪಿದ ಬಳಿಕ ಥಳಿಸುವುದನ್ನು ಜನರು ನಿಲ್ಲಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ವ್ಯಕ್ತಿ ಗೋರಖ್‌ಪುರದವನು ಎಂದು ವರದಿಯಾಗಿದೆ. ಈತ ಸೋಮವಾರ ತನ್ನ ತಂದೆಯ ಬಂದೂಕನ್ನು ಬಳಸಿ ಶಿಕ್ಷಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group