ರಾಷ್ಟ್ರೀಯ ಸುದ್ದಿ

ಸರ್ಕಾರಿ ಕಂಪನಿ ಮಾರಾಟದಲ್ಲಿ ತೊಡಗಿರುವ ಮೋದಿ: ರಾಹುಲ್ ಕಿಡಿ

ಎಲ್ಐಸಿಯ ಶೇಕಡಾ 25ರಷ್ಟು ಷೇರು ಮಾರಾಟಕ್ಕೆ ಆಕ್ಷೇಪ

ವರದಿಗಾರ, (ಸೆ.8): ಮೋದಿ ಜಿ ಅವರು ಸರ್ಕಾರಿ ಕಂಪನಿಗಳನ್ನು ಮಾರಾಟ ಮಾಡುವ ಅಭಿಯಾನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಜೀವ ವಿಮಾ ಕಾರ್ಪೊರೇಷನ್‌ -ಎಲ್‌ಐಸಿ ಶೇಕಡಾ 25ರಷ್ಟು ಷೇರನ್ನು ಮಾರಾಟ ಮಾಡುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ, ಸರ್ಕಾರಿ ಕಂಪನಿಗಳನ್ನು ಮಾರಾಟ ಮಾಡುವ ಅಭಿಯಾನ ನಡೆಸುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ.

“ಮೋದಿ ಜಿ ಅವರು ಸರ್ಕಾರಿ ಕಂಪನಿಗಳನ್ನು ಮಾರಾಟ ಮಾಡುವ ಅಭಿಯಾನ ನಡೆಸುತ್ತಿದ್ದಾರೆ. ಸ್ವಯಂ ಅಪರಾಧದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಮುಚ್ಚಿಹಾಕಲು ಸರ್ಕಾರದ ಆಸ್ತಿಯನ್ನು ಒಂದರ ನಂತರ ಒಂದರಂತೆ ಮಾರಾಟ ಮಾಡಲಾಗುತ್ತಿದೆ. ಜನರ ಭವಿಷ್ಯ ಮತ್ತು ನಂಬಿಕೆಯನ್ನು ಅಪಾಯಕ್ಕೊಡ್ಡಿ ಎಲ್‌ಐಸಿಯನ್ನು ಮಾರಾಟ ಮಾಡುವುದು ಮೋದಿ ಸರ್ಕಾರದ ಇನ್ನೊಂದು ನಾಚಿಕೆಗೇಡಿನ ಪ್ರಯತ್ನ ಎಂದು ಕಿಡಿಕಾರಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group