ರಾಷ್ಟ್ರೀಯ ಸುದ್ದಿ

ಅರ್ನಾಬ್, ಕಂಗನಾ ವಿರುದ್ಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡನೆ

ವರದಿಗಾರ, (ಸೆ.8): ರಿಪಬ್ಲಿಕ್ ಟಿವಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಶಿವಸೇನೆ ಮಹಾರಾಷ್ಟ್ರ ವಿಧಾನಸಭೆಯಲ್ಲಿಂದು ಹಕ್ಕುಚ್ಯುತಿ ನಿರ್ಣಯ ಮಂಡಿಸಿದ್ದು, ಅಧಿವೇಶನದ ಎರಡನೇ ದಿನವಾದ ಇಂದು ಭಾರೀ ಕೋಲಾಹಲಕ್ಕೆ ಕಾರಣವಾಯಿತು.

ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗೆ ಹೋಲಿಸಿದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ದವೂ ಹಕ್ಕುಚ್ಯುತಿ ಮಂಡಿಸಲಾಗಿದೆ.
ವಿಧಾನಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಿ ಮಾತನಾಡಿದ ಶಿವಸೇನೆಯ ಶಾಸಕ ಪ್ರತಾಪ್ ಸರ್ನಾಯಕ್, ಟಿವಿ ಚರ್ಚೆಗಳಲ್ಲಿ ಗೋಸ್ವಾಮಿ ಅವಹೇಳನಕಾರಿ ಪದ ಬಳಸುತ್ತಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಂಸದರು ಮತ್ತು ಸಚಿವರು, ಶಾಸಕರ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸ್ವತಂತ್ರ ಮಾಧ್ಯಮದ ಹೆಸರಿನಲ್ಲಿ, ಅವರು ಮುಖ್ಯಮಂತ್ರಿ, ಪವಾರ್ ಸಾಹೇಬ್ ಮತ್ತು ಇತರ ಚುನಾಯಿತ ಪ್ರತಿನಿಧಿಗಳ ಚಾರಿತ್ರ್ಯವಧೆ ಮಾಡುತ್ತಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ ಮತ್ತು ಸದನ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದು ಅವರು ಹೇಳಿದರು.
ಬಿಜೆಪಿ ಸದಸ್ಯರ ವಿರೋಧದ ನಡುವೆ ಸಂಸದೀಯ ವ್ಯವಹಾರಗಳ ಸಚಿವ ಪರಬ್ ಅವರು ಪ್ರಸ್ತಾವನೆಯನ್ನು ಮಂಡಿಸಿದರು. ಯಾರಾದರೂ ಪ್ರಧಾನ ಮಂತ್ರಿಯನ್ನು ಗುರಿಯಾಗಿಸಿಕೊಂಡಾಗ ನಿಮಗೆ ಕೋಪ ಬರುತ್ತದೆ. ಯಾರಾದರೂ ಮುಖ್ಯಮಂತ್ರಿಯನ್ನು ತಪ್ಪಾಗಿ ಗುರಿಯಾಗಿಸಿಕೊಂಡಾಗ ನೀವು ಯಾಕೆ ಅದೇ ಭಾವನೆಯನ್ನು ವ್ಯಕ್ತಪಡಿಸಬಾರದು ಎಂದು ಪರಬ್ ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.

ಎನ್‌ಸಿಪಿ ನಾಯಕ ಛಗನ್ ಭುಜ್ ಬಲ್ ಮತ್ತು ಸಮಾಜವಾದಿ ಪಕ್ಷದ ಅಬು ಅಝ್ಮಿ ಕೂಡ ಈ ನಿರ್ಣಯವನ್ನು ಬೆಂಬಲಿಸಿದರು. ” ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಮುಕ್ತರಾಗಿದ್ದರೂ, ಕೆಲವು ಸಭ್ಯತೆಗಳಿರಬೇಕು ಎಂದು ಭುಜ್ ಬಲ್ ಹೇಳಿದರು.
ಬಿಜೆಪಿ ಶಾಸಕರು ಈ ಪ್ರಸ್ತಾಪವನ್ನು ವಿರೋಧಿಸಿ ಘೋಷಣೆ ಕೂಗಿದ್ದರಿಂದ ಈ ವಿಷಯದ ಬಗ್ಗೆ ಮೂರು ಬಾರಿ ಕಲಾಪವನ್ನು ಮುಂದೂಡಲಾಯಿತು.
ಬಳಿಕ ನಿರ್ಣಯವನ್ನು ಉಪ ಸ್ಪೀಕರ್ ನರಹರಿ ಅಂಗೀಕರಿಸಿ ಮುಂದಿನ ಕ್ರಮಕ್ಕಾಗಿ ಕಾರ್ಯದರ್ಶಿಯವರಿಗೆ ವರ್ಗಾಯಿಸಿರುವುದಾಗಿ ಹೇಳಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group