ರಾಷ್ಟ್ರೀಯ ಸುದ್ದಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 43.70 ಲಕ್ಷಕ್ಕೆ ಏರಿಕೆ

ವರದಿಗಾರ (ಸೆ.9): ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 89 ಸಾವಿರದ 706 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಒಂದು ಸಾವಿರದ 115 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಪ್ರಸ್ತುತ 8 ಲಕ್ಷದ 97 ಸಾವಿರದ 394 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 43 ಲಕ್ಷದ 70 ಸಾವಿರದ 129ಕ್ಕೆ ಏರಿಕೆಯಾಗಿದೆ. ಈ ಪೈಕಿ 33 ಲಕ್ಷದ 98 ಸಾವಿರದ 845 ಮಂದಿ ವಿವಿಧ ಆಸ್ಪತ್ರೆಗಳಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ ಸೋಂಕಿಗೆ ಇದುವರೆಗೆ 73 ಸಾವಿರದ 890 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 11 ಲಕ್ಷದ 54 ಸಾವಿರದ 549 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದುವರೆಗೂ ಕೊರೊನಾ ಮಾದರಿಗಳ ಪರೀಕ್ಷೆ ಸಂಖ್ಯೆ 5 ಕೋಟಿ 18 ಲಕ್ಷ 4 ಸಾವಿರದ 677ಕ್ಕೆ ಏರಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ-ಐಸಿಎಂಆರ್ ಮಾಹಿತಿ ನೀಡಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group