ರಾಷ್ಟ್ರೀಯ ಸುದ್ದಿ

ನಟಿ ಕಂಗನಾ ರಾಣಾವತ್ ಕಟ್ಟಡ ಕೆಡವದಂತೆ ಬಾಂಬೆ ಹೈಕೋರ್ಟ್ ನಿರ್ದೇಶನ

ವರದಿಗಾರ (ಸೆ.9): ಮಹಾರಾಷ್ಟ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಬಾಲಿವುಟ್ ನಟಿ ಕಂಗನಾ ರಾಣಾವತ್ ಅವರಿಗೆ ಸೇರಿದ ಮುಂಬೈಯಲ್ಲಿರುವ ಕಟ್ಟಡ ಕೆಡವಂತೆ ಬಾಂಬೆ ಹೈಕೋರ್ಟ್ ಬುಧವಾರ ತಡೆ ನೀಡಿದೆ.

ಬಾಂದ್ರಾದಲ್ಲಿರುವ ಕಂಗಾನ ರಣಾವತ್ ಅವರಿಗೆ ಸೇರಿದ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ಕೆಲವು ಮಾರ್ಪಾಡು ಮಾಡಲಾಗಿದೆ ಎಂದು ಆರೋಪಿಸಿ ಬೃಹನ್ ಮುಂಬೈ ನಗರ ಪಾಲಿಕೆ ಸಂಸ್ಥೆ –ಬಿಎಂಸಿ ಕಟ್ಟಡ ಕೆಡವಲು ಮುಂದಾಗಿತ್ತು. ಈ ಸಂಬಂಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಆದರೆ ಇಂದು ಹೈಕೋರ್ಟ್ ಮಧ್ಯಪ್ರವೇಶಿಸಿ ಕಟ್ಟಡ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಬುಧವಾರ ಬೆಳಗ್ಗೆ 11 ಗಂಟೆಯಿಂದ ಬುಲ್ಡೋಜರ್ ಮತ್ತಿತರ ಯಂತ್ರಗಳಿಂದ ಕಟ್ಟಡ ಕೆಡವುವ ಪ್ರಕ್ರಿಯೆ ಆರಂಭಿಸಿತ್ತು. ಇದರಿಂದ ಕಂಗನಾ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕಟ್ಟಡ ಕೆಡವದಂತೆ ಬಿಎಂಸಿಗೆ ಆದೇಶ ಜಾರಿ ಮಾಡಿದೆ. ಮಾತ್ರವಲ್ಲ ಈ ಸಂಬಂಧ ಉತ್ತರ ನೀಡುವಂತೆ ಬಿಎಂಸಿಗೆ ಸೂಚಿಸಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group