ರಾಷ್ಟ್ರೀಯ ಸುದ್ದಿ

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡಲು ನಿರ್ಧಾರ

ವರದಿಗಾರ (ಸೆ.9): ಉತ್ತರ ಪ್ರದೇಶದ ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟು, ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನವನ್ನು ನೀಡಲು ಯೋಗಿ ಆದಿತ್ಯನಾಥ್ ಸರ್ಕಾರ ಮುಂದಾಗಿದೆ. ಈ ವಿಮಾನ ನಿಲ್ದಾಣದ ಕಾಮಗಾರಿಯನ್ನು ಡಿಸೆಂಬರ್ 2021ರೊಳಗೆ ಮುಗಿಸಲು ಸೂಚಿಸಲಾಗಿದೆ.

ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೂರ್ಣಗೊಂಡ ನಂತರ ದೇಶ, ವಿದೇಶಗಳಿಂದ ದೊಡ್ಡ ಸಂಖ್ಯೆಯ ಭಕ್ತರು ಆಗಮಿಸಬಹುದು. ಈ ಹಿನ್ನೆಲೆಯಲ್ಲಿ ಭಕ್ತರಿಗೆ ವ್ಯವಸ್ಥಿತ ಸಾರಿಗೆ ವ್ಯವಸ್ಥೆ ಲಭ್ಯವಾಗುವಂತೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೊಡ್ಡ ವಿಮಾನಗಳ ಆಗಮನ – ನಿರ್ಗಮನಗಳಿಗೆ ಸಂಬಂಧಿಸಿದ ಅಧ್ಯಯನ ಮೇ ತಿಂಗಳಲ್ಲೇ ಆರಂಭಗೊಂಡಿದೆ. ಈಗಾಗಲೇ ಯೋಗಿ ಅದಿತ್ಯನಾಥ್ ಸರ್ಕಾರ ಈ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ 525 ಕೋಟಿ ರೂಪಾಯಿ ಮಂಜೂರು ಮಾಡಿದ್ದು, 300 ಕೋಟಿ ರೂ. ವೆಚ್ಚಮಾಡಿದೆ ಎಂದು ಸಚಿವ ನಂದ ಗೋಪಾಲ್ ನಂದಿ ಹೇಳಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group