ಜಿಲ್ಲಾ ಸುದ್ದಿ

ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ಆಗ್ರಹಿಸಿ SIO ನಿಯೋಗದಿಂದ ಸಿದ್ಧರಾಮಯ್ಯ ಭೇಟಿ

ವರದಿಗಾರ (ಸೆ.9): ಕೇಂದ್ರ ಸರಕಾರ ಅನುಷ್ಠಾನಕ್ಕೆ ತರಲು ಯತ್ನಿಸುತ್ತಿರುವ ನೂತನ ಶಿಕ್ಷಣ ನೀತಿಯ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಸರಕಾರದ ಮೇಲೆ ಒತ್ತಾಯ ತರಬೇಕೆಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು SIO ಕರ್ನಾಟಕ ನಿಯೋಗ ಭೇಟಿ ಮಾಡಿ ಆಗ್ರಹಿಸಿದೆ.

ಸೆಪ್ಟೆಂಬರ್ 16 ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲೂ ಈ ಬಗ್ಗೆ ಚರ್ಚಿಸಬೇಕು ಮತ್ತು ಮುಖ್ಯಮಂತ್ರಿಗಳಿಗೆ ಚರ್ಚೆಗೆ ಸಮಯ ಮೀಸಲು ಇಡಲು ಪತ್ರ ಬರೆಯುವಂತೆ ಸಿದ್ಧರಾಮಯ್ಯ ರವರಿಗೆ ನಿಯೋಗವು ಒತ್ತಾಯಿಸಿದೆ.

ನಿಯೋಗದಲ್ಲಿ SIO ಕರ್ನಾಟಕ ರಾಜ್ಯಾಧ್ಯಕ್ಷರಾದ ನಿಹಾಲ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಡಾ. ನಸೀಮ್ ಅಹ್ಮದ್, ಸಂಪರ್ಕ ಕಾರ್ಯದರ್ಶಿ ಯಾಸೀನ್ ಕೋಡಿಬೆಂಗ್ರೆ, ರಾಜ್ಯ ಕಾರ್ಯದರ್ಶಿ ಅಸೀಮ್ ಜವಾದ್, ಸಯ್ಯದ್ ಶಫಿ, ಸದಸ್ಯರಾದ ಅಫ್ವಾನ್ ಹೂಡೆ ಉಪಸ್ಥಿತರಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group