ರಾಷ್ಟ್ರೀಯ ಸುದ್ದಿ

ಲಾಕ್‌ಡೌನ್, ಕೊರೊನಾ ವಿರುದ್ಧದ ದಾಳಿಯಲ್ಲ, ಬದಲಾಗಿ ದೇಶದ ಬಡವರು, ಯುವಕರ ಭವಿಷ್ಯದ ಮೇಲಿನ ದಾಳಿ; ರಾಹುಲ್‍ ಗಾಂಧಿ ಕಿಡಿ

ವರದಿಗಾರ (ಸೆ.9): ಯಾವುದೇ ಮುನ್ಸೂಚನೆ ನೀಡದೆ ಘೋಷಿಸಿದ್ದ ಲಾಕ್ಡೌಗನ್‍, ಕೊರೋನ ವಿರುದ್ಧದ ದಾಳಿಯಲ್ಲ, ಅದು ಅಸಂಘಟಿತ ವಲಯದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ರಾಹುಲ್‍ ಗಾಂಧಿ ಬುಧವಾರ ವೀಡಿಯೊವೊಂದನ್ನು ಬಿಡುಗಡೆ ಮಾಡಿ, ಅಸಂಘಟಿತ ವಲಯದ ಮೇಲೆ ಮೂರನೇ ದಾಳಿಯನ್ನು ಕೊರೊನಾ ಹೆಸರಿನಲ್ಲಿ ಮಾಡಲಾಗಿದೆ ಎಂದು ಕುಟುಕಿದ್ದಾರೆ.

‘ಬಡವರು, ಸಣ್ಣ ಮತ್ತು ಮಧ್ಯಮ ವ್ಯಾಪಾರಗಳಲ್ಲಿ ಕೆಲಸ ಮಾಡುವವರು, ದೈನಂದಿನ ಕೂಲಿ ಮಾಡುವವರು ದಿನದ ಗಳಿಕೆಯನ್ನು ಅಲಂಭಿಸಿ ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಆದರೆ, ಸರ್ಕಾರ ಯಾವುದೇ ಮುನ್ಸೂಚನೆಯಿಲ್ಲದೆ ಲಾಕ್ ಡೌನ್ ಘೋಷಿಸುವ ಮೂಲಕ ಅವರ ಹೊಟ್ಟೆಯ ಮೇಲೆ ಹೊಡೆದಿದೆ.ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಕೊರೊನಾ ವಿರುದ್ಧ 21 ದಿನಗಳ ಹೋರಾಟ ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ಅಸಂಘಟಿತ ವಲಯದ ಬೆನ್ನೆಲುಬು 21 ದಿನಗಳಲ್ಲೇ ಮುರಿದಿದೆ ಎಂದು ಅವರು ರಾಹುಲ್ ಹೇಳಿದ್ದಾರೆ.ಲಾ

ಕ್‌ಡೌನ್ ಕೊರೋನ ವಿರುದ್ಧದ ದಾಳಿಯಲ್ಲ, ಬದಲಾಗಿ ಇದು ದೇಶದ ಬಡವರ ಮೇಲಿನ ದಾಳಿಯಾಗಿದೆ. ಇದು ನಮ್ಮ ಯುವಕರ ಭವಿಷ್ಯದ ಮೇಲಿನ ದಾಳಿಯಾಗಿದೆ.’ ರಾಹುಲ್‍ ಗಾಂಧಿ ಆರೋಪಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group