ರಾಷ್ಟ್ರೀಯ ಸುದ್ದಿ

ದೇಶದಲ್ಲಿ ಒಂದೇ ದಿನ 95,735 ಮಂದಿಗೆ ಕೊರೊನಾ ಸೋಂಕು; 44 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ವರದಿಗಾರ (ಸೆ.10): ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ನಿನ್ನೆ ಒಂದೇ ದಿನ 95,735 ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1,172 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ತಿಳಿಸಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 44,65,863ಕ್ಕೆ ಏರಿಕೆಯಾಗಿದೆ. ಇದುವರೆಗೆ 75,062 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಮರಣ ಪ್ರಮಾಣ ಈಗ 1.68ರಷ್ಟಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9 ಲಕ್ಷ ದಾಟಿದೆ ಮತ್ತು ಪ್ರಸ್ತುತ ದೇಶದಲ್ಲಿ 9,19,018 ಸಕ್ರಿಯ ಪ್ರಕರಣಗಳಿವೆ. ಬುಧವಾರ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 72,939 ತಲುಪಿದ್ದು, ಇದುವರೆಗೆ ಭಾರತದಲ್ಲಿ 34,71,787 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ 77.74ಕ್ಕೆ ಏರಿಕೆಯಾಗಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್ (ಐಸಿಎಂಆರ್) ಪ್ರಕಾರ, ಕಳೆದ 24 ಗಂಟೆಗಳಲ್ಲಿ 11,29,756 ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಒಟ್ಟು ಪರೀಕ್ಷೆಗಳನ್ನು 5,29,34,433 ಕ್ಕೆ ಏರಿಕೆಯಾಗಿದೆ.

ಜಾಗತಿಕವಾಗಿ, ಅಮೆರಿಕ, ಇದುವರೆಗೆ 62 ಲಕ್ಷ ಪ್ರಕರಣಗಳೊಂದಿಗೆ ಮೊದಲ ಸ್ಥಾನದಲ್ಲಿದೆ, ಭಾರತ ಎರಡನೇ ಸ್ಥಾನದಲ್ಲಿದೆ ಮತ್ತು ಬ್ರೆಜಿಲ್ ಮೂರನೇ ಸ್ಥಾನದಲ್ಲಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group