ರಾಜ್ಯ ಸುದ್ದಿ

ಆಟೋ ಚಾಲನೆ ಮಾಡುತ್ತಿದ್ದ ಆರೋಗ್ಯಾಧಿಕಾರಿ ಮತ್ತೆ ಸೇವೆಗೆ

ವರದಿಗಾರ (ಸೆ.10): ಐಎಎಸ್ ಅಧಿಕಾರಿಗಳ ನಡವಳಿಕೆಯಿಂದ ಬೇಸತ್ತು ಜೀವನೋಪಾಯಕ್ಕಾಗಿ ಆಟೋ‌ ಚಾಲನೆ ವೃತ್ತಿಗೆ ಇಳಿದಿದ್ದ ದಾವಣಗೆರೆ ವೈದ್ಯ ಡಾ.ರಾಘವೇಂದ್ರ ಅವರು ಮತ್ತೆ ಸೇವೆಗೆ ಮರಳಿದ್ದಾರೆ.
ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಕೊಪ್ಪಳ ಜಿಲ್ಲೆಯ ಕುಟುಂಬ ಕಲ್ಯಾಣಾಧಿಕಾರಿಯಾಗಿ ನೇಮಕ ಮಾಡಿ ಸರಕಾರದ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಎಚ್ ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ. ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ.

ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಆರೋಗ್ಯ ಇಲಾಖೆ, ಐಎಎಸ್ ಅಧಿಕಾರಿಗಳ ವರ್ತನೆಯಿಂದ ನೊಂದಿದ್ದ ಡಾ.ಎಂ.ಎಚ್.ರವೀಂದ್ರನಾಥ ಕೆಎಟಿ ಮೊರೆ ಹೋಗಿದ್ದರು. ನ್ಯಾಯಾಲಯದಲ್ಲಿ ಡಾ.ಎಂ.ಎಚ್.ರವೀಂದ್ರನಾಥ ಪರ ತೀರ್ಪು ಬಂದರೂ, ಹುದ್ದೆಯ ಜವಾಬ್ದಾರಿ ವಹಿಸಿರಲಿಲ್ಲ. ಇವರ ಸಮಸ್ಯೆಯನ್ನು ಅರಿತ‌ ಮಾಧ್ಯಮದ ತಂಡ ಸರಕಾರದ ಗಮನ ಸೆಳೆದಿತ್ತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group